ಖಾಸಗಿ ಶಾಲಾ ಧೋರಣೆ ಖಂಡನೀಯ

ರಾಷ್ಟ್ರೀಯ ಹಬ್ಬಗಳ ಮಹತ್ವ ತಿಳಿಸಲು ವಿಫಲ
ಶಿಕ್ಷಣ ಇಲಾಖೆ ನಿರ್ಲಕ್ಷ್ಯ - ನಿಶ್ಚಲ್‌ ಜಾದೂಗಾರ್‌ ಅಸಮಾಧಾನ

ಬಹುತೇಕ ರಾಷ್ಟ್ರೀಯ ಹಬ್ಬಗಳಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ರಜೆ ನೀಡುತ್ತಿದ್ದು ಭಾರತದ ಸ್ವಾತಂತ್ರ ಇತಿಹಾಸ, ದಾರ್ಶನಿಕರ ಜೀವನ ಚರಿತ್ರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲವಾಗಿದೆ. ಸೋಮವಾರ ಬಹುತೇಕ ಶಾಲೆಗಳು ಕಾಟಾಚಾರಕ್ಕೆ ಗಾಂಧಿ ಜಯಂತಿ ಆಚರಿಸಿರುವುದು ಖಂಡನೀಯ ಎಂದು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಿಶ್ಚಲ್‌ ಜಾದೂಗಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು ಆಡಳಿತ ಯಾವುದೇ ಕಾಳಜಿ ಇಲ್ಲದೆ ರಾಷ್ಟ್ರೀಯ ಹಬ್ಬ ಆಚರಿಸಿದೆ. ಪಟ್ಟಣ ಪಂಚಾಯಿತಿ ಕೂಡ ಈ ವಿಚಾರದಲ್ಲಿ ಮೌನ ವಹಿಸಿ ಮಕ್ಕಳಿಗೆ ಇತಿಹಾಸ ಮಹತ್ವ ತಿಳಿಸುವಲ್ಲಿ ವಿಫಲವಾಗಿದೆ. ಶಿಕ್ಷಣ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ಗಾಂಧೀ ತತ್ವಗಳು ಎಳೆಯ ಮಕ್ಕಳಿಗೆ ಬಹುಮುಖ್ಯ ಮಾನದಂಡವಾಗಬೇಕು. ಅದರಲ್ಲೂ ಅಹಿಂಸಾ ತತ್ವದ ಬಗ್ಗೆ ಕನಿಷ್ಠ ಗಾಂಧೀ ಜಯಂತಿ ದಿನದಂದಾದರು ಮಕ್ಕಳಿಗೆ ತಿಳಿಹೇಳುವ ಮಹತ್ವದ ಜವಾಬ್ದಾರಿ ನಿರ್ವಹಿಸಬೇಕು. ಮಕ್ಕಳನ್ನು ಸಮಾಜಕ್ಕೆ ಬೇಕಾಗುವ ಉತ್ತಮ ಪ್ರಜೆಗಳನ್ನಾಗಿಸುವ ಜವಾಬ್ದಾರಿ ಎಲ್ಲರ ಮೇಲಿದ್ದು ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡುವ ಬದಲು ಇಂತಹ ದಿನದಂದು ವಿಶೇಷ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಆಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೇ ಸರ್ಕಾರ ಗಂಭೀರವಾಗಿ ಈ ವಿಚಾರದ ಬಗ್ಗೆ ಯೋಚಿಸಿ, ಸಾಹಿತಿಗಳು, ಬರಹಗಾರರು, ಬುದ್ಧಿಜೀವಿಗಳು, ಚಿಂತಕರ ಸಲಹೆ ಪಡೆಯುವುದು ಸೂಕ್ತ ಹಾಗೂ ಮುಂದಿನ ದಿನಮಾನಗಳಲ್ಲಿ ಗಾಂಧೀ, ಬುದ್ಧ, ಬಸವ, ಅಂಬೇಡ್ಕರ್‌, ನಾರಾಯಣಗುರು, ದಾಸ, ಶ್ರೇಷ್ಠರಾದಿಯಾಗಿ, ದಾರ್ಶನಿಕರ, ಸಮಾಜ ಸುಧಾರಕರ ಸಾಧನೆ-ಸುಧಾರಣೆಗಳನ್ನು ಮಕ್ಕಳಿಗೆ ಕಡ್ಡಾಯವಾಗಿ ತಿಳಿಸುವ ಕೆಲಸ ಶಿಕ್ಷಣ ಇಲಾಖೆ ಮಾಡಲಿ ಎಂದು ನಿಶ್ಚಲ್‌ ಜಾದೂಗಾರ್‌ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post