ನರೇಗಾ ಹಣ ಬಿಡುಗಡೆಗೊಳಿಸಿ

ಬ್ಯಾಂಕ್‌ ಅಲೆದು ಕಾರ್ಮಿಕರು ಸುಸ್ತು
ಸರ್ಕಾರದ ನಿರ್ಲಕ್ಷ್ಯ ಖಂಡನೀಯ - ಟಿ.ಜೆ. ಅನಿಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ಸಂದಾಯವಾಗುತ್ತಿಲ್ಲ. ಹಣ ಬಿಡುಗಡೆಗೊಳಿಸದೆ ಕೆಲಸ ನಿರ್ವಹಿಸುವಂತೆ ಒತ್ತಡ ಹೇರುವುದು ಸರಿಯಲ್ಲ. ತಕ್ಷಣ ನರೇಗಾ ಹಣ ಬಿಡುಗಡೆಗೊಳಿಸಬೇಕು ಎಂದು ಗ್ರಾ.ಪಂ. ಒಕ್ಕೂಟದ ಅಧ್ಯಕ್ಷ ಟಿ.ಜೆ. ಅನಿಲ್‌ ಒತ್ತಾಯಿಸಿದ್ದಾರೆ.

ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರು ಪರದಾಟಕ್ಕೆ ಸಿಲುಕಿದ್ದಾರೆ. ಎರಡೂವರೆ ತಿಂಗಳಿನಿಂದ ಬ್ಯಾಂಕ್‌ ಅಲೆದು ಕಾರ್ಮಿಕರು ಸುಸ್ತಾಗಿದ್ದಾರೆ. ಸಂಘ ಸಂಸ್ಥೆಯಲ್ಲಿ ಸಾಲ ಮಾಡಿಕೊಂಡು ಕುಟುಂಬ ನಿರ್ವಹಿಸುವ ಸಮಸ್ಯೆಗೆ ಸಿಲುಕಿದ್ದಾರೆ. ನಿಗಧಿತ ಸಮಯಕ್ಕೆ ಹಣ ಮಂಜೂರಾಗದೆ ಇರುವುದು ಕಾರ್ಮಿಕರ ಉತ್ಸಾಹ ಕುಂದಿದೆ ಎಂದು ದೂರಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಪಿಡಿಓ ಸಭೆ ನಡೆಸಿ ಟಾರ್ಗೆಟ್‌ ವಿಧಿಸುತ್ತಿದ್ದಾರೆ. ಜನರ ಮನವೊಲಿಸಿ ಕೆಲಸ ನಿರ್ವಹಿಸಿದರೆ ಹಣ ಮಂಜೂರು ವಿಷಯದಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡನೀಯ ಎಂದು ಆರೋಪಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post