ಹಣಗೆರೆಗೆ ಯು.ಟಿ. ಖಾದರ್ ಭೇಟಿ

ಶರಾವತಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸ್ಪೀಕರ್
ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಶ್ರೀ ಭೂತರಾಯ ಚೌಡೇಶ್ವರಿ ದೇವಸ್ಥಾನಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಜೊತೆಗೆ ಹಣಗೆರೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ಸ್ಥಳೀಯರು ಗಮನ ಸೆಳೆದರು. ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಆಲಿಸಿದ ಅವರು ಬೆಂಗಳೂರಿಗೆ ಆಹ್ವಾನಿಸಿದ್ದಾರೆ. ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಭೇಟಿ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಹಣಗೆರೆ ಗ್ರಾ.ಪಂ. ಅಧ್ಯಕ್ಷ ರಮೇಶ್, ಸದಸ್ಯರಾದ ಸುಧೀರ್, ಪಿಡಿಓ ದರ್ಮಪ್ಪ, ಕಾಂಗ್ರೆಸ್ ಮಖಂಡರಾದ ಅಮ್ರಪಾಲಿ ಸುರೇಶ್, ಎಸ್.ಪಿ. ದಿನೇಶ್, ಫಾರುಕ್, ಮುನ್ನಾ, ಕರಕುಚ್ಚಿ ಲೋಕೇಶ್, ಮಳಗಾರ್ ನಂದಕುಮಾರ್, ಅತ್ತಿಗದ್ದೆ ಅರುಣ್, ವಾಸುಕಿ ಕುಕ್ಕೆ ಇದ್ದರು.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post