ʼಹುಲಿ ಉಗುರುʼ ಪ್ರಕರಣ

ಕಾಯ್ದೆ ತಿದ್ದುಪಡಿ ಅಗತ್ಯ – ಕಿಮ್ಮನೆ
ಕಾನೂನಿನ ಅಜ್ಞಾನ ಕ್ಷಮಾರ್ಹವಲ್ಲ

ದೇಶದಲ್ಲಿ ಅನೇಕ ಅನುಪಯುಕ್ತ ಕಾಯ್ದೆಗಳು ಜನಮಾನದಲ್ಲಿ ಬಾರದೆ ಜೀವಂತವಿದೆ. ಅವುಗಳನ್ನು ಪುನರ್‌ ಪರಿಶೀಲಿಸಿ ವರ್ತಮಾನದ ಅಗತ್ಯತೆಗೆ ತಕ್ಕಂತೆ ಪೂರಕ ತಿದ್ದುಪಡಿ ಮಾಡಬೇಕು. “ಕಾನೂನಿನ ಅಜ್ಞಾನ ಕ್ಷಮಾರ್ಹವಲ್ಲ” ಆದರೆ ಜನರಿಗೆ ತಿಳಿದ ಕಾನೂನುಗಳನ್ನು ಹೇರಿಕೆ ಮಾಡುವುದು ಕೂಡ ಸರಿಯಲ್ಲ. ಅರಣ್ಯ ಕಾಯ್ದೆ ಸಾರ್ವಜನಿಕರಿಗೆ ತಿಳಿಯದ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಗಬೇಕು. ಪೂರಕ ತಿದ್ದುಪಡಿಗೆ ಸರ್ಕಾರ ಅವಕಾಶ ಮಾಡಿಕೊಡುವುದು ಅಗತ್ಯ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹುಲಿ ಉಗುರು ಮತ್ತು ಇತರೆ ಪ್ರಾಣಿಗಳಿಗೆ ಸಂಭಂಧಪಟ್ಟಂತೆ ಕಾನೂನು ಬಾಹಿರವಾಗಿ ಅನೇಕ ಭಾಗಗಳಲ್ಲಿ ವಸ್ತುಗಳ ಸಂಗ್ರಹಣೆ ಇದೆ. ಸರ್ಕಾರ ತಾತ್ಕಾಲಿಕವಾಗಿ ಸುಗ್ರೀವಾಜ್ಞೆ ಮಾಡಿ ಸಾರ್ವಜನಿಕರಿಗೆ ಕಾಲಾವಕಾಶ ನೀಡಿ ಸಂಗ್ರಹಿಸಿದ ವಸ್ತುಗಳನ್ನು ಸರ್ಕಾರಕ್ಕೆ ಹಸ್ತಾಂತರ ಮಾಡುವ ಅವಕಾಶ ಮಾಡಬೇಕು. ಈ ನಿಯಮ ಸರ್ಕಾರ ಹಾಗೂ ಸಾರ್ವಜನಿಕರ ಪಾಲಿಗೆ ಒಳ್ಳೆಯದಾಗಲಿ. ಇಲ್ಲದಿದ್ದರೆ ಅಕ್ರಮವಾಗಿ ಸಂಗ್ರಹಿಸಿದ ವಸ್ತುಗಳು ಕಾನೂನು ಕಾಯ್ದೆಗೆ ಹೆದರಿ ಕಸದ ಪಾಲಾಗುತ್ತದೆ. ಇಂತಹ ವಸ್ತುಗಳನ್ನು ಸಂಗ್ರಹಣೆಗೆ ಸ್ಥಳೀಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿಯೇ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರಿಗೆ ಕಿಮ್ಮನೆ ಪತ್ರ ಬರೆದಿರುವುದನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post