ಅರಳಸುರಳಿಯಲ್ಲಿ ಧಾರುಣ ಘಟನೆ

ಮೂವರು ಸಜೀವ ದಹನ
ಮನಕಲಕುವ ಘಟನೆಗೆ ಬೆಚ್ಚಿದ ಜನತೆ
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೋಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಘಟನೆ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯಬೇಕಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

1 Comments

  1. ಅರಳಸುರಳಿಯ ಕಲ್ಲೋಣಿ. ಕೇಕೋಡ್ ಅನ್ನೋದು ಅವರ ಸರ್ ನೇಮ್. ಊರು ಅಲ್ಲ.

    ReplyDelete
Previous Post Next Post