ಗೀತಮ್ಮ ವಿಧಿವಶ

ಪತ್ರಕರ್ತ ಪಿ.ಮಂಜುನಾಥ್ ಮಾತೃವಿಯೋಗ
ತೀರ್ಥಹಳ್ಳಿ ಮಿತ್ರ ವಾರಪತ್ರಿಕೆಯ ಸಂಪಾದಕ ಪಿ. ಮಂಜುನಾಥ್ ತಾಯಿ ಗೀತಮ್ಮ (59) ಬುಧವಾರ ರಾತ್ರಿ 11.30 ಕ್ಕೆ ವಿಧಿವಶರಾದರು. ಶ್ರಮಜೀವಿಯಾಗಿ ಬದುಕು ಕಟ್ಟಿಕೊಂಡಿದ್ದ ಅವರು ಪತಿಯ ಮರಣದ ನಂತರ ನಾಲ್ವರು ಮಕ್ಕಳನ್ನು ಅತ್ಯಂತ ಕಾಳಜಿಯಿಂದ ಬೆಳೆಸಿದ್ದರು. ಜೀವನದ ಏಳುಬೀಳುಗಳನ್ನು ಗಟ್ಟಿಯಾಗಿ ಎದುರಿಸಿ ಮಕ್ಕಳಿಗಾಗಿ ತಮ್ಮ ಬದುಕನ್ನು ಸಂಪೂರ್ಣ ತ್ಯಾಗ ಮಾಡಿದ್ದರು. ಮಕ್ಕಳನ್ನು ಬೆಳೆಸುವುದರಲ್ಲಿಯೇ ಜೀವನದ ಪರಿಪೂರ್ಣತೆ ಕಂಡುಕೊಂಡಿದ್ದರು‌.
ಇವರಿಗೆ ಪುತ್ರ ಪಿ.ಮಂಜುನಾಥ್ ಸೇರಿದಂತೆ ಮೂವರು ಪುತ್ರಿಯರು, ಮೊಮ್ಮಕ್ಕಳು ಇದ್ದಾರೆ. ಪಾರ್ಥಿವ ಶರೀರವನ್ನು ಮೇಲಿನಕುರುವಳ್ಳಿಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಅಂತ್ಯಕ್ರಿಯೆ 12.30ಕ್ಕೆ ಗಂಟೆಗೆ ನಡೆಯಲಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post