ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ

8 ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಶಮಿತಾ ಬಿ.ಯು.




ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆ ಶಮಿತಾ ಬಿ.ಯು. (24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ‌.

ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಇಬ್ನರು ಪ್ರೀತಿಸಿ ಕಳೆದ ಮಾರ್ಚ್ ತಿಂಗಳಿನಲ್ಲಿ ಮದುವೆಯಾಗಿದ್ದರು. ಮನೆಯಲ್ಲಿ ಅತ್ತೆ, ಮಾವ ಇದ್ದರು‌.
ಶರ್ಮಿತಾ ರಾತ್ರಿ ಊಟ ಮಾಡಿ ಮಲಗಲು ಉಪ್ಪರಿಗೆ ಮೇಲೆ ತೆರಳಿದ್ದರು. ಬೆಳಿಗ್ಗೆ ಬಾಗಿಲು ತೆರೆಯದಿದ್ದ ಹಿನ್ನಲೆಯಲ್ಲಿ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡಯಲಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಲಭ್ಯವಾಗಿದ್ದು ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.
ಜೆಸಿ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು  ಶವಪರೀಕ್ಷೆ ನಡೆಸಿದ್ದಾರೆ. ತಹಶೀಲ್ದಾರ್ ಜಕ್ಕನಗೌಡರ್ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post