ಕಮಿಷನ್ ವಿಚಾರದಲ್ಲಿ ರಾಮ -ರಹೀಮಾ ಒಂದೇ - ಅಮ್ರಪಾಲಿ ಲೇವಡಿ


ಕೆಲವರಿಗೆ ಕಮೀಷನ್ ವಿಚಾರ ಬಂದಾಗ ರಹೀಮ್ ರೆಹಮಾನ್ ಆಗಿಬರುತ್ತಾರೆ ಧರ್ಮದ ವಿಷಯ ರಾಜಕೀಯದ ವಿಷಯ ಬಂದಾಗ ರಾಮ ಬೇರೆ ರಹೀಮ್ ಬೇರೆ ಯಾಕಾಗುತ್ತಾರೆ ಅಮ್ರಪಾಲಿ ಸುರೇಶ್ ಲೇವಡಿ ಮಾಡಿದ್ದಾರೆ.

ನಮ್ಮ ನಾಯಕರಾದ ಶ್ರೀಯುತ ಕಿಮ್ಮನೆ ರತ್ನಾಕರ್ ಅವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವವರು ಹಲವು ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಅನೇಕ ದೇವಸ್ಥಾನಗಳಿಗೆ ವೈಯ್ಯುಕ್ತಿಕ ವಾಗಿ ದೇಣಿಗೆಗಳನ್ನು ಸಲ್ಲಿಸಿರುತ್ತಾರೆ ಬಸ್ಟಾಂಡ್ ನಲ್ಲಿ ನಿಂತು ಬಾಯಿಗೆ ಬಂದು ಮಾತನಾಡುವವರಿಗೆ ಇದು ಅರ್ಥ ಆಗುವುದಿಲ್ಲ. ಇಪ್ಪತ್ತು ವರ್ಷಗಳಿಂದ ಜನಪ್ರತಿನಿಧಿಯಾಗಿ ತೀರ್ಥಹಳ್ಳಿ ಪುರಾಧೀಶ ಶ್ರೀ ರಾಮೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ನಾನು ನೀಡಿದ ದೇಣಿಗೆಯ ಅರ್ಧದಷ್ಟು ಹಣ ನೀಡದ ಬಗ್ಗೆ ಸಮರ್ಥನೆ ನೀಡಲು ಸಾಧ್ಯವೇ ಅಮ್ರಪಾಲಿ ಸುರೇಶ್ ಪ್ರಶ್ನಿಸಿದ್ದಾರೆ ಶ್ರೀ ರಾಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಿಮ್ಮನೆ ಯವರು ಶ್ರಮಿಸಿದ್ದರು ಈಗ ಕೋದಂಡ ರಾಮ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಚಾಲನೆ ನೀಡಲಿದ್ದಾರೆ ಅವರ ಜೊತೆ ತೀರ್ಥಹಳ್ಳಿ ಪ್ರಜ್ಞಾವಂತರು ಜೊತೆಯಾಗಿದ್ದಾರೆ ನಿಮಗೂ ಶ್ರೀ ರಾಮೇಶ್ವರ ಹಾಗೂ ಕೋದಂಡ ರಾಮ ಒಳ್ಳೆಯ ಬುದ್ದಿ ನೀಡಿ ಈ ಕಾರ್ಯದಲ್ಲಿ ಪಾಲ್ಗೊಳ್ಳುವ ಮನಸ್ಸು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಅಮ್ರಪಾಲಿ ಸುರೇಶ್ ಪತ್ರಿಕಾ ಹೇಳಿಕೆ ನೀಡಿದ್ದು ಯಥಾವತ್ತಾಗಿ ಪ್ರಕಟಿಸಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post