ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ

ಕೆರೆಯಿಂದ ಅಕ್ರಮ ಮಣ್ಣು ತೆಗೆದ ಪ್ರಕರಣ
ವರದಿ ನೀಡುವಲ್ಲಿ ವಿಳಂಬ ಧೋರಣೆ

ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 71.45 ಲಕ್ಷ ರೂ. ನಷ್ಟವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಕಾರ್ಯಪಾಲಕ ಇಂಜಿನಿಯರ್ ವರದಿ ಸಲ್ಲಿಸಿದ್ದರು.

ವರದಿ ಆಧಾರದ ಮೇಲೆ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011’ ಕಲಂ 09 ಅಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಸಂಬಂಧ ನವೆಂಬರ್ 24ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತಿ ಸಿಇಒಗೆ ನಿರ್ದೇಶಿಸಲಾಗಿತ್ತು. ಆದರೆ, ಅವರು ಇದೂವರೆಗೂ ವರದಿ ಸಲ್ಲಿಸಿಲ್ಲ.

ಹೀಗಾಗಿ, ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 16 ರಂದು ಅವರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು. ತಪ್ಪದೆ ವರದಿ ಸಲ್ಲಿಸಬೇಕು. ಅಲ್ಲದೆ, 25,000 ರೂ. ದಂಡ ಕಟ್ಟಿ, ಮುಚ್ಚಳಿಕೆ ಬರೆದುಕೊಟ್ಟರೆ ಅವರನ್ನು ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಹೇಳಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post