ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥ

ಹೊಸಹಳ್ಳಿ ಗ್ರಾ.ಪಂ.ನಲ್ಲಿ ಪೂರ್ಣ ಕುಂಭ ಸ್ವಾಗತ

ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಬುಧವಾರ ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು ಜಾಗೃತಿ ಜಾಥ ವಾಹನವನ್ನು ಕೈಮರ ಸರ್ಕಲ್ ನಿಂದ ಬೈಕ್ ರಾಲಿ ಪೂರ್ಣ ಕುಂಭ ಜಾಥ ಹಾಗೂ ಶಾಲಾ ಮಕ್ಕಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಗಿರೀಶ್ ಉದ್ಘಾಟಿಸಿದರು. ಪಿಡಿಒ ಜಯಂತಿ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾಲತಾ ಸಂವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಮರ ಹಾಗೂ ಕೊಕ್ಕೋಡು ಶಾಲೆಯ ಮಕ್ಕಳು ದೇಶಭಕ್ತಿ ಗೀತೆ ಹಾಡಿದರು. ಕೋಡ್ಲು ಶಾಲೆಯ ಶಿಕ್ಷಕ ಪ್ರಶಾಂತ್ ಸಂವಿಧಾನದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂವಿಧಾನದ ಪೂರ್ವ ಪೀಠಿಕೆ,  ಪ್ರಸ್ತಾವನೆಯ ಪ್ರತಿಜ್ಞಾವಿಧಿ ಭೋದಿಸಲಾಯಿತು. ಹೊಸಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಮೇಶ್, ಸದಸ್ಯ ಕೆ.ಎಸ್.ಎನ್. ಮೂರ್ತಿ, ಲತಾ ಪುರುಷೋತ್ತಮ್, ಅಂಗನವಾಡಿ ಮೇಲ್ವಿಚಾರಕಿ ಚಂದ್ರಿಕಾ,  ಸಿ.ಆರ್.ಪಿ. ಧನಂಜಯ್, ಸೆಲ್ವ ಕುಮಾರ್, ಕೊಡಸಗೊಳ್ಳಿ ಶಾಮಣ್ಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಮತ್ತಿತರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಗೀತಾ ವಂದಿಸಿದರು. ಸುಧಾ ನಿರೂಪಿಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post