ಮೇಗರವಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥ

ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ಯಾತ್ರೆ ಮೇಗರವಳ್ಳಿ ಗ್ರಾಮ ಪಂಚಾಯಿತಿಯ ಆರಳಿಕಟ್ಟೆ ಸರ್ಕಲ್ ನಿಂದ ಬಲೂನ್ ಮತ್ತು ಕ್ಯಾಂಡಲ್ ಹಾಗೂ ಪೂರ್ಣ ಕುಂಭ ಸ್ವಾಗತದೊಂದಿಗೆ ಜಾಥಾ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ವಿವಿಧ ಶಾಲೆಗಳ ಮಕ್ಕಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಅಂಗನವಾಡಿ ಆಶಾ ಕಾರ್ಯಕರ್ತೆಯರು ವಿವಿಧ ಶಾಲೆಯ ಶಿಕ್ಷಕರು ಸಾರ್ವಜನಿಕರು ವಿವಿಧ ಇಲಾಖೆ ಅಧಿಕಾರಿಗಳು  ಒಳಗೊಂಡಂತೆ ಸ.ಹಿ.ಪ್ರಾಥಮಿಕ ಶಾಲಾ ಆವರಣದಲ್ಲಿ ಜಾಥದೊಂದಿಗೆ ಸ್ವಾಗತಿಸಲಾಯಿತು. ಈ ಕಾರ್ಯಕ್ರಮದ ಪ್ರಯುಕ್ತ ಶಾಲೆಗಳಲ್ಲಿ  ಶಾಲಾ ಮಕ್ಕಳಿಗೆ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ದೇವೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿರುವ ಸರ್ವರನ್ನು ಪಿಡಿಒ ಭಾರತಿ ಎಂ. ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಆಶಾಲತಾ ಸಂವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು.  ಸರ್ಕಾರಿ ಪ್ರಥಮ ದರ್ಜೆ ಕಾಲೇಜ್  ಬಾಳೆಬೈಲು ಪದವಿ ವಿದ್ಯಾರ್ಥಿನಿ ದೀಪ್ತಿ  ಮೇಗರವಳ್ಳಿ ಗನವಳ್ಳಿ ಸಂವಿಧಾನ ಕುರಿತು ಉಪನ್ಯಾಸ ನೀಡಿದರು ಹಾಗೂ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಮತ್ತು ಪ್ರಸ್ತಾವನೆಯ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ನೊಡೆಲ್ ಅಧಿಕಾರಿ ಸಂತೋಷ ಹಾಗೂ ಮೇಗರವಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪ್ರತೀಮಾ ಕೆ.ಎಸ್.ಪುಟ್ಟಪ್ಪ, ಸದಸ್ಯರಾದ ಜಿ.ಕೆ.ಶ್ರೀನಿವಾಸ, ಅಜೀತ್ ಅಣ್ಣುವಳ್ಳಿ, ನವಿನ್ ತೊಟದ ಮನೆ, ಪಾರ್ವತಿ ರವಿ, ಲಕ್ಷ್ಮೀ ನರಸಿಂಹ, ಜೀನತ್ ಭಾನು, SDMS ಅಧ್ಯಕ್ಷ ವೆಂಕಟೇಶ್ ಹೆಗ್ಡೆ, ಮಹೇಶ‍್, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳು, ಪೋಷಕರು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸಿಬ್ಬಂಧಿಗಳು ಉಪಸ್ಥಿತರಿದ್ದರು. ರಾಜೇಶ ವಂದಿಸಿದರು. ಪಿಡಿಒ ಭಾರತಿ ಎಂ ನಿರೂಪಿಸಿದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post