ರಂಗಕಲಾವಿದ ಸುಬ್ರಾಯಚಾರ್ ನಿಧನ

 

ತೀರ್ಥಹಳ್ಳಿ ತಾಲೂಕಿನ ಹಿರಿಯ ರಂಗ ಕಲಾವಿದ ಹೊದಲಾ ಸುಬ್ರಾಯಾಚಾರ್ (80) ಅನಾರೋಗ್ಯದಿಂದ ಪಟ್ಟಣದ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಹೊದಲ -ಅರಳಾಪುರ ಗ್ರಾ.ಪಂ.ವ್ಯಾಪ್ತಿಯ ಸುಬ್ರಾಯಾಚಾರ್ ಹೊದಲದಲ್ಲಿ 70-80ರ ದಶಕದಲ್ಲಿ ರಾಜ್ಯಾದ್ಯಂತ ಮನೆಮಾತಾಗಿದ್ದ ಹೊದಲಾದ ಅಂಬಾ ಮಿತ್ರ ಮಂಡಳಿಯ ಹೆಸರಾಂತ, ವಿಶಿಷ್ಠ ಕಲಾವಿದರಾಗಿದ್ದರು.

ಕಿರುತೆರೆ ನಟರಾಗಿ, ಕುಶಲಕರ್ಮಿಯಾಗಿ, ಆಟೋಚಾಲಕನಾಗಿ, ಮಾಜಿ ಅಂಚೆ ವಿತರಕನಾಗಿ ಕಾರ್ಯನಿರ್ವಹಿಸಿದ್ದ ಇವರು, ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ತಾಲೂಕಿನ ಕಿತ್ತನಗದ್ದೆಯ ಪುತ್ರನ ಮನೆಯಲ್ಲಿ ನೆಲೆಸಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದು,ಮಂಗಳವಾರದಂದು ಇವರ ಅಂತ್ಯಸಂಸ್ಕಾರ ನೆಡೆಯಲಿದೆ.

ಪಟ್ಟಣದ ನಟಮಿತ್ರರು ತಂಡದವರು ಗೋಪಾಲಗೌಡ ರಂಗಮಂದಿರದಲ್ಲಿ 2023 ಸಾಲಿನ ವಿಶ್ವ ರಂಗಭೂಮಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಸುಬ್ರಾಯಾಚಾರ್ ರವರಿಗೆ ರಂಗ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post