ಕೋಣಂದೂರು ಸುಧಾಕರ ಶೆಟ್ಟಿ ವಿಧಿವಶ

 

ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ನಿವಾಸಿಯಾಗಿದ್ದ ದಿವಂಗತ ಸುಧಾಕರ ಶೆಟ್ಟಿ ತೀರ್ಥಹಳ್ಳಿ ತಾಲ್ಲೂಕು ಬಂಟರ ಸಂಘದ ಕ್ರಿಯಾಶೀಲಾ ಸದಸ್ಯ ಹೃದಯಘಾತದಿಂದ ನಿಧನರಾಗಿದ್ದಾರೆ. ಇವರಿಗೆ 60 ವರ್ಷ ವಯಸ್ಸಾಗಿದ್ದು ಇಬ್ಬರು ಪುತ್ರರು ಒಬ್ಬಳು ಪುತ್ರಿ, ಮಾಜಿ ಕೋಣಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರು, ಹಾಲಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ನಿ ಗಾಯತ್ರಿ ಶೆಟ್ಟಿಯವರನ್ನ ಹಾಗೂ ಅಪಾರ ಸ್ನೇಹಿತ ಬಳಗವನ್ನು ಅಗಲಿದ್ದಾರೆ. ದಿವಂಗತ ಸುಧಾಕರ ಶೆಟ್ಟಿ "ಕೋಟೆಗದ್ದೆ " ಕುಟುಂಬದವರಾಗಿದ್ದು, ಬಂಟರ ಸಂಘದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸಮಾಜದ ಒಳಿತಿಗಾಗಿ ಸದಾ ಚಿಂತಿಸುತಿದ್ದ ಸುಧಾಕರ ಶೆಟ್ಟಿ ನಿಧನದಿಂದಾಗಿ ಬಂಟರ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಅಂತಿಮ ವಿಧಿವಿಧಾನ ಕೋಣಂದೂರಿನ ಅವರ ಸ್ವಗೃಹದಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ. ತಾಲ್ಲೂಕು ಬಂಟರ ಸಂಘದ ಗೌರವಧ್ಯಕ್ಷ ಅಡ್ಡಮನೆ ಪ್ರಭಾಕರ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷ ಬಿ.ಎಲ್. ಪ್ರಭಾಕರ ಹೆಗ್ಡೆ ಹಾಗೂ ಕಾರ್ಯದರ್ಶಿ ಬಿ‌.ಆರ್. ರಾಘವೇಂದ್ರ ಶೆಟ್ಟಿ ಮತ್ತು ಬಂಟರ ಸಂಘದ ಮಹಿಳಾ ವಿಭಾಗದವರು ಕಂಬನಿ ಮಿಡಿದ್ದಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post