ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ - ಬಿ.ಎಸ್. ಯಡಿಯೂರಪ್ಪ ವಿರುದ್ಧ FIR

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post