ಮೋದಿ ವಿರುದ್ಧ ದೂರು ಸಲ್ಲಿಕೆ

ದೇಶದ ಶಾಂತಿ, ಸುವ್ಯವಸ್ಥೆ ಹಾಳು ಮಾಡುವ ಪ್ರಚೋದನಕಾರಿ ಹೇಳಿಕೆ
ನರೇಂದ್ರ ಮೋದಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ʼಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಂಮರಿಗೆ ಕೊಡುತ್ತೆʼ ಎಂಬ ಮೋದಿ ಹೇಳಿಕೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಹಾಯಕ ಚುನಾವಣಾಧಿಕಾರಿ, ಪೊಲೀಸ್‌ ಉಪಾಧೀಕ್ಷಕರಿಗೆ ಸೋಮವಾರ ದೂರು ಸಲ್ಲಿಸಿದರು.

ಈ ಹೇಳಿಕೆ ಸಮುದಾಯಗಳ ಮಧ್ಯೆ ದ್ವೇಷ, ಕೋಮುಭಾವನೆ ಕೆರಳಿಸುವ ಹೇಳಿಕೆಯಾಗಿದ್ದು. ರಾಜ್ಯ ದೇಶದ ಶಾಂತಿ ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಪ್ರಚೋದನಕಾರಿ ಹೇಳಿಕೆಯು ಪ್ರಧಾನಿ ಹತಾಶೆ ಹಾಗೂ ಸೋಲಿನ ಭಯದಿಂದ ಕೂಡಿದ ಪ್ರತಿಕ್ರಿಯೆ ಆದರೂ ಸಹ ಇದು ಹಿಂದೂ ಮಹಿಳೆಯರ ಭಾವನಾತ್ಮಕ ವಿಚಾರಗಳನ್ನು ಕೆರಳಿಸುವ ವ್ಯವಸ್ಥಿತ ಒಳಸಂಚಾಗಿದೆ.

ಹೇಳಿಕೆಯೂ ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಪ್ರಧಾನಿ ಗೌಪ್ಯ ಪ್ರಮಾಣವಚನ ಮತ್ತು ಸಂಸತ್‌ ಸದಸ್ಯರ ಪ್ರಮಾಣವಚನಕ್ಕೆ ವಿರೋಧವಾಗಿದೆ. ಭಾರತೀಯ ದಂಡ ಸಂಹಿತೆಯ ಅನ್ವಯ ಸದರಿ ಹೇಳಿಕೆ ಅಪರಾಧವಾಗಿದೆ ಎಂದು ಹೇಳಿದ್ದಾರೆ.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post