ಹಿಂದುತ್ವ ಗೋರಕ್ಷಣೆಗಾಗಿ ಸ್ಪರ್ಧೆ

ಹಿಂದುತ್ವ ಪ್ರತಿಪಾದಿಸಿದಕ್ಕೆ ವಿದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ

ಭದ್ರಾವತಿಯಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಕೆ.ಎಸ್. ಈಶ್ವರಪ್ಪ

ದೇಶದಲ್ಲಿ ಹಿಂದುತ್ವದ ಉಳಿವಿಗಾಗಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ನರೇಂದ್ರ ಮೋದಿಯವರಂತಹ ಮಹಾನ್ ನಾಯಕರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಹಿಂದುತ್ವದ ಮೂಲ ಉದ್ದೇಶ ಮಹಿಳೆಯರಿಗೆ ಗೌರವ ಸ್ಥಾನ ಕೊಡುವುದು. ಆದರೆ ಈಗ ನಿಜವಾದ ಹಿಂದುತ್ವ ಮರೆಯಾಗಿ ಕುಟುಂಬ ರಾಜಕಾರಣ ಮತ್ತು ಹಿಂದುತ್ವ ವಿರೋಧಿಗಳ ಜೊತೆ ಸೇರಿ ಅವಕಾಶವಾದಿತನ ಮಾಡುವುದೇ ಹಿಂದುತ್ವ ಎಂದು ಪ್ರಚಾರ ಮಾಡಲಾಗುತ್ತಿದೆ. ನನ್ನ ಹೋರಾಟ ಇಂತಹ ನಕಲಿ ಹಿಂದುತ್ವ ಹಾಗೂ ಯಡಿಯೂರಪ್ಪ ಕುಟುಂಬ ರಾಜಕಾರಣದ ವಿರುದ್ದ ಎಂದು ರಾಷ್ಟ್ರಭಕ್ತ ಬಳಗದ ಲೋಕಸಭಾ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ.

ಭದ್ರಾವತಿಯ ಬಿ.ಆರ್.ಪಿಯಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ತರಲು ಅನೇಕ ಮಹಾ ಪುರುಷರು ಪ್ರಾಣ ತ್ಯಾಗ ಮಾಡಿ ಸ್ವರ್ಗದಲ್ಲಿದ್ದಾರೆ ರಾಜ್ಯದಲ್ಲಿ ಆಗುತ್ತಿರುವ ಹುಬ್ಬಳ್ಳಿ ಪ್ರಕರಣದಂತಹ ಘಟನೆಗಳು ಸ್ವರ್ಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಿಗೆ ನೋವು ತಂದಿದೆ. ಹುಬ್ಬಳ್ಳಿಯಲ್ಲಿ ಕಾಲೇಜಿಗೆ ಹೋದ ವಿಧ್ಯಾರ್ಥಿನಿಯನ್ನು ಕಾಲೇಜಿನ ಒಳಗೆ ನುಗ್ಗಿ ಕೊಲೆ ಮಾಡಲಾಗಿದೆ.

ಮುಗ್ದ ಹುಡುಗಿಯರಿಗೆ ಪ್ರೀತಿ ತೋರಿಸಿ ಅವರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಇದು ಲವ್ ಜಿಹಾದ್ ಪ್ರಕರಣವಲ್ಲ ಎಂದು ಹೇಳಿದ್ದಾರೆ ಕೊಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯದಲ್ಲಿ ಒತ್ತಡ ಹೆಚ್ಚಾದಾಗ ಸಿಐಡಿ ಗೆ ಪ್ರಕರಣ ವಹಿಸಿದ್ದಾರೆ. ಸಿಐಡಿ ಅಧಿಕಾರಿಗಳು ಮುಖ್ಯಮಂತ್ರಿ ಹೇಳಿದಂತೆ ವರದಿ ನೀಡುತ್ತಾರೆ ಆದ್ದರಿಂದ ನೇಹಾ ಕೊಲೆ ಪ್ರಕರಣ ಸಿಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೇಡಿಗಳ ರೀತಿ ಹಿಂದೂ ಯುವಕರನ ಮೇಲೆ ಹಲ್ಲೆ ಮಾಡಿ ಓಡಿ ಹೋಗುತ್ತಿದ್ದಾರೆ. ಕೊಟ್ಟಿಗೆಯಲ್ಲಿ ಕಟ್ಟಿದ ಹಸು ಕರುವನ್ನು ಕಳ್ಳತನ ಮಾಡುತ್ತಿದ್ದಾರೆ ಅದನ್ನು ತಡೆಯಲು ಹೋದ ಯುವಕರ ಮೇಲೆ ರಾಜ್ಯ ಸರ್ಕಾರ ಕೇಸ್ ಹಾಕುತ್ತಿದೆ. ನಾವೇನು  ಪಾಕಿಸ್ಥಾನದಲ್ಲಿದ್ದೇವಾ ಎಂದು ಪ್ರಶ್ನೆ ಮಾಡಿದ ಅವರು 500ವರ್ಷಗಳ ನಂತರ ರಾಮ ಮಂದಿರ ವಿವಾದ ಬಗೆಹರಿಯಿತು ರಾಮ ಮಂದಿರ ನಿರ್ಮಾಣ ಮಾಡಲು ಮೋದಿ ಬರಬೇಕಾಯಿತು. ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ಬೇರೆ ಬೇರೆ ದೇಶಗಳಿಂದ ನನಗೆ ಬೆದರಿಕೆ ಕರೆ ಬರುತ್ತಿದೆ, ಫೋನ್ ಮೂಲಕ ಬೆದರಿಕೆ ಹಾಕಬೇಡಿ ಧೈರ್ಯ ಇದ್ದರೆ ಮುಂದೆ ಬನ್ನಿ ಈ ರೀತಿ ಬೆದರಿಕೆಗಳಿಗೆ ನಾನು ಅಂಜುವುದಿಲ್ಲ.

ಕಾಶ್ಮೀರದ ಲಾಲ್ ಚೌಕದಲ್ಲಿ ಹಾಕಲಾಗಿದ್ದ ಪಾಕಿಸ್ಥಾನ ಧ್ವಜ ತೆಗೆದು ಹಿಂದೂಸ್ಥಾನ ಧ್ವಜವನ್ನು ಏರಿಸಲು ಮೋದಿ ಕರೆ ಮೇರೆಗೆ ಲಾಲ್ ಚೌಕ್ ಗೆ ಹೋಗಿದ್ದೆ ಅಲ್ಲಿಂದ ನನಗೆ ಮೋದಿಯವರ ಜೊತೆ ಒಡನಾಟ ಆರಂಭವಾಯಿತು. ಮೋದಿಯವರು ಹೋದಲೆಲ್ಲಾ ಕುಟುಂಬ ರಾಜಕಾರಣ ವಿರುದ್ಧ ಮಾತನಾಡುತ್ತಾರೆ ಆದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಹಿಡಿತದಲ್ಲಿದೆ. ಈ ಕುಟುಂಬ ರಾಜಕಾರಣ ತೊಲಗಿ ಬಿಜೆಪಿಯ ರಾಷ್ಟ್ರಭಕ್ತ ರಾಜಕಾರಣ ಮತ್ತೆ ಮುನ್ನೆಲೆಗೆ ಬರಬೇಕು ಎಂಬುದು ನನ್ನ ಉದ್ದೇಶ ಎಂದರು.

ಸಭೆಯಲ್ಲಿ ಮಾಳೆನಹಳ್ಳಿ, ಸಿಂಗನಮನೆ, ಶಂಕರ ಘಟ್ಟ, ಗ್ಯಾರೇಜ್ ಕ್ಯಾಂಪ್ ಗ್ರಾಮಸ್ಥರು ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮುಖಂಡರಾದ ರಂಗೋಜಿರಾವ್, ಬಿ.ಡಿ.ಈಶ್ವರಪ್ಪ, ಚೌಡಪ್ಪ, ಮಹೇಶ್ ಕುಮಾರ್, ವೇದಮೂರ್ತಿ, ನಾರಾಯಣಪ್ಪ, ಪ್ರಭಾಕರ್ ಉಪಸ್ಥಿತರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post