ಮೇ 25; ಡಾ.ಜೆ.ಕೆ. ರಮೇಶ್ ಅವರ “ಗಾಳಿಬೆಳಕಿನ ಪಯಣಿಗರು” ಪುಸ್ತಕ ಬಿಡುಗಡೆ

ತೀರ್ಥಹಳ್ಳಿಯ 50ಕ್ಕೂ ಹೆಚ್ಚು ಸಮಾಜವಾದಿಗಳ ಪರಿಚಯ

ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಿಕಾರಿಪುರ ಸುವ್ವಿ ಪಬ್ಲಿಕೇಷನ್, ಸಾಹಿತ್ಯ ಬಳಗದ ಸಹಯೋಗದಲ್ಲಿ ʼಗಾಳಿಬೆಳಕಿನ ಪಯಣಿಗರುʼ ಪುಸ್ತಕ ಬಿಡುಗಡೆ ಸಮಾರಂಭ ಇಲ್ಲಿನ ಬಂಟರ ಭವನದಲ್ಲಿ ಮೇ 25ರ ಸಂಜೆ 4.30ಕ್ಕೆ ನಡೆಯಲಿದೆ ಎಂದು ಕೃತಿ ಕತೃ ಜೆ.ಕೆ. ರಮೇಶ್ ತಿಳಿಸಿದರು.
ತಾಲ್ಲೂಕಿನ ಸುಮಾರು 50ಕ್ಕೂ ಹೆಚ್ಚು ಸಮಾಜವಾದಿಗಳ ಪರಿಚಯವನ್ನು ಪುಸ್ತಕದಲ್ಲಿ ವಿವರಿಸಲಾಗಿದೆ. ತೇಜಸ್ವಿ, ಕುವೆಂಪು, ಅನಂತಮೂರ್ತಿ ಸೇರಿದಂತೆ ಸದಾಶಿವರಾಯರು, ಶಾಂತವೇರಿ ಗೋಪಾಲಗೌಡರು, ಬಿ.ಬಿ.ಮೂರ್ತಿ, ಹುಗಳವಳ್ಳಿ ಸುರೇಂದ್ರ ಮುಂತಾದವರ ಸಮಾಜವಾದಿ ತತ್ವ, ಸಿದ್ಧಾಂತದ ಕುರಿತು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಿದ್ದೇನೆ ಎಂದು ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ಕಾದಂಬರಿಕಾರ್ತಿ ಸವಿತಾ ನಾಗಭೂಷಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಾಹಿತಿ ನಟರಾಜ್ ಹುಳಿಯಾರ್ ಭಾಗವಹಿಸಲಿದ್ದಾರೆ. ಪ್ರಕಾಶಕ ಸುನೀಲ್ ಕುಮಾರ್ ಬಿ.ಎನ್. ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ವಾಸಂತಿ ಶೆಣೈ ಗೀತಾಗಾಯನ ನಡೆಸಿಕೊಡಲಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಾಹಿತ್ಯಾಸಕ್ತ ಬಳಗದ ಕಡಿದಾಳ್ ದಯಾನಂದ, ಬಿ.ಗಣಪತಿ ಉತ್ತುಂಗ, ಕಸಾಪ ಅಧ್ಯಕ್ಷ ಟಿ.ಕೆ.ರಮೇಶ್ ಶೆಟ್ಟಿ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post