ನಿಹಾಲ್ ಹೆಚ್.ಜಿ. ರಾಜ್ಯಕ್ಕೆ 6ನೇ ರ‍್ಯಾಂಕ್

ಕುಗ್ರಾಮದ ವಿದ್ಯಾರ್ಥಿಯ ಸಾಧನೆ

ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ನಿಹಾಲ್ ಹೆಚ್.ಜಿ. 625 ಅಂಕಗಳಿಗೆ 620 ಅಂಕ ಪಡೆದು ರಾಜ್ಯಕ್ಕೆ 6ನೇ ರ‍್ಯಾಂಕ್ ಪಡೆದಿದ್ದಾರೆ. ಶೇಕಡಾ 99.20 ಶ್ರೇಯಾಂಕ ಗಳಿಸಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಯ ಸಾಧನೆಗೆ ಪ್ರಶಂಸೆ ಕೇಳಿ ಬರುತ್ತಿದೆ.
ಯಡೂರು ಸಮೀಪದ ವರಾಹಿ ಹಿನ್ನೀರು ಪ್ರದೇಶದ ಮೇಲುಸುಂಕ ಸಮೀಪದ ಹುಮ್ಮಡಗಲ್ಲು ಕುಗ್ರಮದ ಗಣೇಶ್ ಮತ್ತು ಸಹನಾ ದಂಪತಿಯ ಪುತ್ರ. ವಿಜ್ಞಾನ, ಸಮಾಜವಿಜ್ಞಾನದಲ್ಲಿ 100ಕ್ಕೆ 100, ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದಿದ್ದಾರೆ.
ಯಡೂರು ಸರ್ಕಾರಿ ಪ್ರೌಢಶಾಲೆ ಶೇಕಡಾ 95 ಶ್ರೇಯಾಂಕ ಪಡೆದಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post