ಉಳುಮಡಿ ಗ್ರಾಮಸ್ಥರ ಮನವೊಲಿಸಿದ ಶಾಸಕ ಆರಗ ಜ್ಞಾನೇಂದ್ರ

ಮತದಾನ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು
ತೀರ್ಥಹಳ್ಳಿ ತಾಲ್ಲೂಕಿನ ಬಿದರಗೋಡು ಪಂಚಾಯತ್ ಉಳುಮಡಿ ಗ್ರಾಮಸ್ಥರು ಮೂಲಬೂತ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರದ ತೀರ್ಮಾನ ಮಾಡಿದ್ದರು.

ವಿಷಯ ತಿಳಿದ ಶಾಸಕರು ಶುಕ್ರವಾರ ಬೆಳಗ್ಗೆ 8 ರ ಸುಮಾರಿಗೆ ಉಳುಮಡಿಗೆ ಬೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಿ ಮತದಾನದ ಅನಿವಾರ್ಯತೆ ತಿಳಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿ ಗ್ರಾಮಸ್ಥರನ್ನು ಮತದಾನ ಮಾಡಲು ವಿನಂತಿಸಿದರು. ಗ್ರಾಮಸ್ಥರು  ಪೂರಕವಾಗಿ ಸ್ಪಂದಿಸಿ ಮತದಾನ ಮಾಡುವ ತೀರ್ಮಾನ ತೆಗೆದುಕೊಂಡರು. 
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post