ಮಾಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಯ್ತು ಕೇಸ್
ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಯುವತಿಗೆ ಕಿರುಕುಳ ನೀಡಿರುವ ಹಿನ್ನಲೆಯಲ್ಲಿ ಅನ್ಯ ಕೋಮಿನ ಯುವಕ ಜೈಲುಪಾಲಾಗಿದ್ದಾನೆ.
ಯುವತಿಗೆ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸರು ಯುವತಿಯ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ಪ್ರಕರಣದಲ್ಲಿ ಬಿಜೆಪಿ ಪ್ರಮುಖರು ಮಧ್ಯ ಪ್ರವೇಶಿಸಿದ್ದು ಪ್ರಕರಣ ತಿರುವು ಪಡೆಯುವ ಸಾಧ್ಯತೆ ಹೆಚ್ಚಿದೆ.