ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸನ್ಮಾನ
ಜೂನ್ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನ


ತೀರ್ಥಹಳ್ಳಿ ತಾಲ್ಲೂಕಿನ ಕಟ್ಟಡ, ನಿರ್ಮಾಣ ಮತ್ತು ಎಲ್ಲಾ ರೀತಿಯ ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗಾಗಿ ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು. ತೀರ್ಥಹಳ್ಳಿಯಲ್ಲಿ ಆಯೋಜಿಸುವ ಕಾರ್ಮಿಕರ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ನಿಯಮಗಳಿಲ್ಲ. ಉತ್ತಮ ಸಾಧನೆ ಮಾಡಿದ ಪ್ರತಿಯೊಬ್ಬ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಜೂನ್ 4ರ ಒಳಗಾಗಿ ಸಲ್ಲಿಸಬೇಕು ಎಂದು ಸಂಘದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಸಂಪರ್ಕಿಸಿ : 
ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘ(ರಿ), ಮೇಲಿನಕುರುವಳ್ಳಿ (ಸಂಘದ ಕಚೇರಿ)

ಅಥವಾ

ತೀರ್ಥಹಳ್ಳಿ ಒನ್, ಈ  ಸೇವಾ ಕೇಂದ್ರ
1ನೇ ಮಹಡಿ, ಎ.ಸಿ.ಸಿ ಬಿಲ್ಡಿಂಗ್ 
ಜೂನಿಯರ್ ಕಾಲೇಜ್ ರಸ್ತೆ, ತೀರ್ಥಹಳ್ಳಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
81974 75200

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post