ಎಸ್‌ಎಸ್‌ಎಲ್‌ಸಿ ಫಲಿತಾಂಶ : ವಾಗ್ದೇವಿ ಶಾಲೆ ಜಿಲ್ಲೆಗೆ ಪ್ರಥಮ

‌ರಾಜ್ಯಕ್ಕೆ ಕೃತಿಕಾ ಕೆ. 5ನೇ ರ‍್ಯಾಂಕ್, ಛಾಯಾ ಎಸ್‌ 6ನೇ ರ‍್ಯಾಂಕ್

ನಿರಂತರ 17ನೇ ವರ್ಷವೂ ಶೇಕಡಾ 100 ಫಲಿತಾಂಶ

ತೀರ್ಥಹಳ್ಳಿಯ ವಾಗ್ದೇವಿ ಆಂಗ್ಲಾ ಮಾದ್ಯಮ ಶಾಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಗೆ ಮೊದಲ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದೆ. ಈ ಶಾಲೆಯ ಕೃತಿಕಾ 625ಕ್ಕೆ 621 ಅಂಕಗಳನ್ನು ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದರೆ ಛಾಯಾ ಎಸ್‌ 625ಕ್ಕೆ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಒಟ್ಟು 115 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಎಲ್ಲರೂ ತೇರ್ಗಡೆಯಾಗುವ ಮೂಲಕ ನಿರಂತರ 17ನೇ ವರ್ಷ ವಾಗ್ದೇವಿ ಶಾಲೆ ಶೇಕಡಾ 100 ಫಲಿತಾಂಶ ಪಡೆದಿದೆ. ಒಟ್ಟು 14 ವಿದ್ಯಾರ್ಥಿಗಳು 600 ಕಿಂತಲೂ ಹೆಚ್ಚಿನ ಅಂಕ ಪಡೆದಿದ್ದಾರೆ. 76 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಪೋಷಕರು ಅಭಿನಂದಿಸಿದ್ದು ಸಂಸ್ಥೆಯ ಅಧ್ಯಕ್ಷರೂ, ಆಡಳಿತ ಮಂಡಳಿ, ಅಧ್ಯಾಪಕ ವರ್ಗಕ್ಕೆ ಶುಭಾಷಯ ತಿಳಿಸಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post