ಮನೆಯಲ್ಲಿ ಮಲಗಿದ್ದಾಗಲೇ ದಿಢೀರ್ ಸಾವು

ಅರಣ್ಯ ರಕ್ಷಕ ಬಸವರಾಜ್ ಇನ್ನಿಲ್ಲ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅರಣ್ಯ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜು (34) ಬೆಜ್ಜವಳ್ಳಿಯ ವಾಸದ ಮನೆಯಲ್ಲಿ ಮಲಗಿದ್ದಾಗಲೇ ದಿಢೀರ್ ಅಸುನೀಗಿದ್ದಾರೆ.‌ ಬಸವರಾಜು ದಬ್ಬಣಗದ್ದೆ, ಮಹಿಷಿ, ಮಂಡಗದ್ದೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಬಸವರಾಜು ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post