ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ
ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ರವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಮನೆಗೆ ಹೊರಟಿದ್ದ ಭಾನುಪ್ರಕಾಶ್ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.