ಹಾವೇರಿಯಲ್ಲಿ ಭಯಾನಕ ಅಪಘಾತ

ಭದ್ರಾವತಿಯ 13 ಪ್ರಯಾಣಿಕರು ಸಾವು


ನಿಂತಿದ್ದ ಲಾರಿಯೊಂದಕ್ಕೆ ವೇಗವಾಗಿ ಬರುತ್ತಿದ್ದ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು ಭದ್ರಾವತಿಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿಡ ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್(45), ಭಾಗ್ಯ(40), ನಾಗೇಶ (50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), (24), (40), (50) ಮೃತರು ಮೃತಪಟ್ಟವರು. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತ ದುರ್ದೈವಿಗಳು. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಿಟಿ ವಾಹನದಲ್ಲೇ ಅಪ್ಪಚ್ಚಿಯಾಗಿದ್ದ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಇತ್ತೀಚಿನ ದಿನಗಳಲ್ಲಿ ನಡೆಸ ಭಯಾನಕ ಅಪಘಾತ ಇದಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post