ಮುನ್ನೂರು ರಸ್ತೆ ಕುಸಿತ

ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ
ತಾತ್ಕಾಲಿಕ ನೆರವು ನೀಡಿದ ಗ್ರಾ.ಪಂ. ಅಧ್ಯಕ್ಷ ಬಂಡೆ ವೆಂಕಟೇಶ್‌

ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿಯ ಮುನ್ನೂರು ಗ್ರಾಮದ ಸಂಪರ್ಕ ರಸ್ತೆ ಗಾಳಿ ಮಳೆಗೆ ಕುಸಿದು ಹೋಗಿದ್ದು 30ಕ್ಕೂ ಹೆಚ್ಚು ಮನೆಗಳಿರುವ ಈ ಹಳ್ಳಿಗೆ ಈಗ ಸಂಪರ್ಕವೇ ಕಡಿತವಾಗುವ ಭೀತಿ ತಲೆದೋರಿದೆ. ಈಗಾಗಲೇ ಯಾವುದೇ 4 ಚಕ್ರದ ವಾಹನಗಳು, ಆಟೋ ಸಹ ಹೋಗದ ಪರಿಸ್ಥಿತಿ ತಲೆದೋರಿದೆ.

ಪರಿಸ್ಥಿತಿಯ ಗಂಭೀರತೆ ತಿಳಿದುಕೊಂಡ ಶಾಸಕ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಅಲ್ಲದೇ ಗ್ರಾಮಸ್ಥರಿಗೆ ತಕ್ಷಣವೇ ನೆರೆ ಪರಿಹಾರ ನಿಧಿಯಿಂದ ರಸ್ತೆ ದುರಸ್ಥಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಣ್ಣಪ್ಪ, ಕೋಮನೆ ದಿನೇಶ್‌, ಗ್ರಾ.ಪಂ. ಮಾಜಿ ಅಧ್ಯಕ್ಷ ಮುನ್ನೂರು ಜಗನ್ನಾಥ್ ಮುಖಂಡರಾದ ದೇವದಾಸ್‌, ಸುಧಾಕರ್‌, ಆದರ್ಶ ಮುತ್ತುಗುಂಡಿ, ಸಂತೋಷ್‌ ದೇವಾಡಿಗ ಇನ್ನಿತರರು ಜೊತೆಯಲ್ಲಿ ಇದ್ದರು.

ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಂಡೆ ವೆಂಕಟೇಶ್‌ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದು ಗ್ರಾಮ ಪಂಚಾಯಿತಿ ವತಿಯಿಂದ ಸಾಧ್ಯವಾಗುವ ಎಲ್ಲಾ ನೆರವನ್ನು ನೀಡುವುದಾಗಿ ತಿಳಿಸಿದ್ದಾರಲ್ಲದೇ ತಕ್ಷಣದ ಉಪಯೋಗಕ್ಕಾಗಿ ಬೋಲ್ಡ್ರಸ್‌ ಕಲ್ಲುಗಳನ್ನು ತರಿಸಿಕೊಟ್ಟಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post