ಸಹ್ಯಾದ್ರಿ ಸಂಸ್ಥೆಗೆ 1,337 ಕೋಟಿ ವ್ಯವಹಾರ

2.75 ಕೋಟಿ ನಿವ್ವಳ ಲಾಭ
ಸೆಪ್ಟೆಂಬರ್‌ 17ಕ್ಕೆ ವಾರ್ಷಿಕ ಮಹಾಸಭೆ - ಬಸವಾನಿ ವಿಜಯದೇವ್

ತೀರ್ಥಹಳ್ಳಿ ತಾಲ್ಲೂಕಿನ ಸಹ್ಯಾದ್ರಿ ವಿವಿದೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘವು ವಾರ್ಷಿಕ 1,337 ಕೋಟಿ ವಹಿವಾಟು ನಡೆಸಿದೆ. 10 ಕೋಟಿಗೂ ಹೆಚ್ಚು ಲಾಭ ಗಳಿಸಿದ್ದು 2.75 ಕೋಟಿ ನಿವ್ವಳ ಲಾಭ ಪಡೆದಿದೆ ಎಂದು ಸಂಘದ ಅಧ್ಯಕ್ಷ ಬಸವಾನಿ ವಿಜಯದೇವ್‌ ಹೇಳಿದರು.

ರಾಜ್ಯದ 29 ಜಿಲ್ಲೆಗಳಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ 10 ಸಾವಿರಕ್ಕೂ ಅಧಿಕ ಷೇರುದಾರರನ್ನು ಹೊಂದಿದೆ. ಆಡಿಟ್‌ ವರ್ಗೀಕರಣದಲ್ಲಿ ಎ ಗ್ರೇಡ್‌ ಪಡೆದಿದೆ. 85 ಕೋಟಿ ಠೇವಣಿ ಸಂಗ್ರಹಿಸಿದ್ದು 135 ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದು ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಸಹ್ಯಾದ್ರಿ ಚಿಟ್‌ ಫಂಡ್‌ 103 ಗುಂಪುಗಳನ್ನು ಹೊಂದಿದೆ. ಸಹ್ಯಾದ್ರಿ ಮಿನರಲ್‌ ವಾಟರ್‌, ಸಾರ್ವಜನಿಕ ಸಾರಿಗೆ, ಪೆಟ್ರೋಲ್‌ ಬಂಕ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜೊತೆಗೆ ಎಮಿಷನ್‌ ಟೆಸ್ಟ್‌ ಘಟಕ, ನಂದಿನ  ಉತ್ಪನ್ನ ಮಾರಾಟ ಮಳಿಗೆ ತೆರೆದು ಗ್ರಾಹಕರಿಗೆ 24 ಗಂಟೆಗಳ ಸೇವೆ ನೀಡುತ್ತಿದ್ದೇವೆ. ಒಟ್ಟು ಸಂಸ್ಥೆಯಲ್ಲಿ 200ಕ್ಕೂ ಹೆಚ್ಚು ಯುವಕ, ಯುವತಿಯರಿಗೆ ಉದ್ಯೋಗವಕಾಶ ನೀಡಲಾಗಿದೆ ಎಂದರು.

ವಾರ್ಷಿಕ ಮಹಾಸಭೆ ಸೆಪ್ಟೆಂಬರ್‌ 17 ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ, ಶಿಮುಲ್‌ ಹಾಲು ಒಕ್ಕೂಟದ ನಿರ್ದೇಶಕ, ಎಂಎಡಿಬಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ಎಂ.ಮಂಜುನಾಥ ಗೌಡ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ನಿರ್ದೇಶಕ ಅರುಣ್‌ ಕುಮಾರ್‌, ನಗದು ವಹಿವಾಟು ಮುಖ್ಯಸ್ಥೆ ಕಾವ್ಯ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post