ಶಾಸಕ ಆರಗ ಜ್ಞಾನೇಂದ್ರ ಮಲತಾಯಿ ಧೋರಣೆ

ಕೇಂದ್ರದ ಮನೆ ಹಂಚಿಕೆಯಲ್ಲಿ ತಾರತಮ್ಯ
ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ವಿನಾಯಕ ತುಪ್ಪದಮನೆ

ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾನ್ಯ ವರ್ಗದ ಬಡವರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಹಂಚಿಕೆಗಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿದ ಮನೆಗಳಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಶಾಸಕರು ಮನೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸಿದ್ದು ಅನ್ಯಾಯವನ್ನು ಖಂಡಿಸಿ ಪ್ರತಿಭಟಿಸುವುದಾಗಿ ಹೊದಲ-ಅರಳಾಪುರ ಗ್ರಾಮ ಪಂಚಾಯಿತಿ ಸದಸ್ಯ ವಿನಾಯಕ ಎಂ ಎಚ್ಚರಿಸಿದ್ದಾರೆ.

ತಾಲ್ಲೂಕಿನಲ್ಲಿರುವ ಕೆಲವು ಗ್ರಾಮ ಪಂಚಾಯಿತಿಗಳಿಗೆ ತಮ್ಮ ಪ್ರಭಾವ ಬಳಸಿ ಸರ್ಕಾರದಿಂದ 100 ಮನೆಗಳನ್ನು ಹಂಚಿಕೆ ಮಾಡಿದ್ದಾರೆ. ಹೊದಲ-ಅರಳಾಪುರ ಗ್ರಾಮ ಪಂಚಾಯಿತಿಗೆ ಕೇವಲ ಒಂದು ಮನೆಯನ್ನು ಮಾತ್ರ ನೀಡಿದ್ದಾರೆ. ಇದೇ ರೀತಿ ಅನೇಕ ಪಂಚಾಯಿತಿಯಲ್ಲಿ ತಾರತಮ್ಯ ಧೋರಣೆ ಅನುಸರಿಸಿದ್ದಾರೆ. ಕೆಲವು ಗ್ರಾಮ ಪಂಚಾಯಿತಿಗೆ ಹೆಚ್ಚಿಗೆ ಮನೆಗಳನ್ನು ಹಂಚುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ನಾಗರೀಕರು ಅಧಿಕೃತವಾಗಿ ಅರ್ಜಿ ಸಲ್ಲಿಸಿರುತ್ತಾರೆ. ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಿ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಿಸಬೇಕು. ಇಲ್ಲದಿದ್ದರೆ ಶಾಸಕರ ಮಲತಾಯಿ ಧೋರಣೆ ಖಂಡಿಸಿ ಕಿಮ್ಮನೆ ರತ್ನಾಕರ, ಆರ್‌.ಎಂ. ಮಂಜುನಾಥ ಗೌಡ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post