ಶೀರೂರು ಅಕ್ರಮ ಹಲಸಿನ ನಾಟ ಪ್ರಕರಣ

ಬಿಜೆಪಿ ಯುವ ಮುಖಂಡ ಬಂಧನ
ಆಗುಂಬೆ ವಲಯ ಉಪ ಸಂರಕ್ಷಣಾಧಿಕಾರಿ ಸಸ್ಪೆಂಡ್
ಪ್ರಕರಣ ಮುಚ್ಚಿ ಹಾಕಲು ಹುನ್ನಾರ, ಇಲ್ಲೇನ್ ನಡೀತಿದೆ.‌..!


ತೀರ್ಥಹಳ್ಳಿ ತಾಲ್ಲೂಕಿನ ಶೀರೂರು ಹಲಸಿನ ಮರ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸ್ಥಳೀಯವಾಗಿ ಮನೆ ಕಟ್ಟುತ್ತಿದ್ದ ಬಿಜೆಪಿ ಯುವ ಮುಖಂಡನ ಬಂಧನವಾಗಿದೆ. ಮಾಹಿತಿ ಮೂಲಗಳ ಪ್ರಕಾರ ಆತನನ್ನು ತೀರ್ಥಹಳ್ಳಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪಡುವಳ್ಳಿ, ಶೀರೂರು, ಜಾವಗಲ್ಲು ಭಾಗದಲ್ಲಿ ಮರ ಕಡಿದಿರುವ ಪ್ರಕರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯವಾಗಿ ಶೋಧಾಚರಣೆಗೆ ಮುಂದಾಗಿದ್ದು ಸಿಕ್ಕವರ ಮೇಲೆ ಕೇಸ್ ಹಾಕಿ ಪ್ರಕರಣಕ್ಕೆ ತೀಲಾಂಜಲಿ ಇಡುವ ಪ್ರಯತ್ನ ನಡೆಸಿದ್ದಾರೆ. ಅಷ್ಟಾಗಿಯೂ ಗ್ರಾಮದಿಂದ ಹೋದಂತಹ ಲೋಡ್ ಗಟ್ಟಲೆ ಮರದ ತುಂಡುಗಳ ಬಗ್ಗೆ ಯಾವುದೇ ತನಿಖೆ ನಡೆಯುತ್ತಿಲ್ಲ. ದಂಧೆಕೋರರ ಪರವಾಗಿ ನಿಂತ ಅರಣ್ಯ ಅಧಿಕಾರಿಗಳ ರಕ್ಷಣೆಗೆ ಇಲಾಖೆ ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸಿಕ್ಕವರಿಗೆಲ್ಲ ಹೆದರಿಸುವ ಪ್ರಯತ್ನ ಕೂಡ ದಂಧೆಕೋರಿಂದ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿದೆ‌. ದಂಧೆಗೆ ನೆರವು ನೀಡುವ ಅಧಿಕಾರಿಗಳ ಹೆಸರು ಮುನ್ನೆಲೆಗೆ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೀಗ ದಂಧೆಕೋರರ ಹೆಗಲಿಗೆ ಏರಿದ್ದು ಗ್ರಾಮದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಿಜವಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬರುತ್ತಿದೆ‌.

ಉಪವಲಯ ಅರಣ್ಯಾಧಿಕಾರಿ ಸಸ್ಪೆಂಡ್‌ !

ಬೀಟೆ ಮರದ ದಿಮ್ಮಿಗಳ ಕಳ್ಳ ಸಾಗಾಣಿಕೆ ಆರೋಪದಡಿಯಲ್ಲಿ ಆಗುಂಬೆ ಉಪವಲಯ ಅರಣ್ಯಾಧಿಕಾರಿ ಆರ್.ಯುವರಾಜ್‌ ಅಮಾನತ್ತುಗೊಂಡಿದ್ದಾರೆ.

ಹೊಸನಗರ ತಾಲೂಕಿನ ಎಂ.ಗುಡೇಕೊಪ್ಪ ಗ್ರಾಮ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಯುವರಾಜ್ ಅರಳಿಕೊಪ್ಪ ಗ್ರಾಮದ ಸರ್ವೆ ನಂಬರ್ 57ರಲ್ಲಿ ಬಿದ್ದಿದ್ದ ಬೀಟೆ ಮರವನ್ನ ಸರ್ಕಾರಿ ನಾಟ ಸಂಗ್ರಾಲಯಕ್ಕೆ ಸಾಗಿಸದೇ ಅಕ್ರಮವಾಗಿ ಬೇರೆ ಕಡೆಗೆ ಸಾಗಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. 

ಈ ಸಂಬಂಧ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯ ಸಚಿವರ ಮೌಖಿಕ ನಿರ್ದೇಶನದ ಮೇರೆಗೆ ವಿಚಾರಣೆ ನಡೆಸಿದ್ದರು. ಈ ಕುರಿತು ಸಾಗರದ ಉಪ ಸಂರಕ್ಷಣಾಧಿಕಾರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವರದಿ ನೀಡಿತ್ತು. 

ಸ್ಥಳ ಪರಿಶೀಲನೆ ನಡೆಸಿದ್ದ ವಿಚಾರಣಾ ತಂಡದ ಎದುರು ಆರೋಪಿತ ಉಪ ವಲಯ ಅರಣ್ಯಾಧಿಕಾರಿಯು ತಪ್ಪೊಪ್ಪಿಕೊಂಡಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post