ಶಿಗ್ಗಾವಿ ; ತೀರ್ಥಹಳ್ಳಿ ಬಿಜೆಪಿ ನಾಯಕರ ಪ್ರಚಾರ

ವಿವಿಧ ಗ್ರಾಮಗಳಿಗೆ ತೆರಳಿ ಮತಯಾಚನೆ
ಭರತ್ ಬೊಮ್ಮಯಿಗೆ ಇದೆ ತೀರ್ಥಹಳ್ಳಿ ನಿಕಟ  ಸಂಬಂಧ

ಶಿಗ್ಗಾವಿಯ ಉಪಚುನಾವಣೆ ಬಿರುಸಿನ ಪ್ರಚಾರದಲ್ಲಿ ಭಾನುವಾರ ತೀರ್ಥಹಳ್ಳಿಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಭರತ್ ಬಸವರಾಜ ಬೊಮ್ಮಯಿ ಜೊತೆಗೆ ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು.

ತೀರ್ಥಹಳ್ಳಿಯ ಬಿಜೆಪಿ ಮಂಡಲದ ಅಧ್ಯಕ್ಷ ನವೀನ್ ಹೆದ್ದೂರು, ಕಾರ್ಯದರ್ಶಿ ಮಧುರಾಜ್ ಹೆಗ್ಡೆ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ತಾಲ್ಲೂಕು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಬಡಿ ಪ್ರದೀಪ್ ಭರತ್ ಬೊಮ್ಮಯಿ ಪರವಾಗಿ ಮತಯಾಚನೆ ನಡೆಸಿದರು.

ಬಸವರಾಜ ಬೊಮ್ಮಯಿ ಪುತ್ರ ಭರತ್ ಬೊಮ್ಮಯಿ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಅಳಿಯ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ತಮ್ಮ ಬೀಗರ ಮನೆಗೆ ತೆರಳಿರುವುದನ್ನು ನೆನಪಿಸಿಕೊಳ್ಳಬಹುದು. ಅಲ್ಲದೇ ನೂತನವಾಗಿ ತುಂಗಾ ನದಿಗೆ ಅಡ್ಡಲಾಗಿ ಗಬಡಿನಲ್ಲಿ ನಿರ್ಮಾಣವಾಗುತ್ತಿರುವ ಹೊಸಹಳ್ಳಿ ಸಂಪರ್ಕದ ಸೇತುವೆಯನ್ನು ಇದೇ ಉದ್ದೇಶಕ್ಕೆ ನೀಡಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post