ಶಿವಮೊಗ್ಗ ಜಿಲ್ಲಾ ಪದಾಧಿಕಾರಿಗಳು ತಪ್ಪದೇ ಬನ್ನಿ

ನವೆಂಬರ್ 23 ಶನಿವಾರ ಯಾದಗಿರಿಯಲ್ಲಿ ಡಿಎಸ್‌ಎಸ್‌ ರಾಜ್ಯ ಸಮಿತಿ ಸಭೆ - ಕೆ ವಿ ನಾಗರಾಜ್

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿಲಕ್ಷ್ಮೀನಾರಾಯಣ ನಾಗವಾರ ಬಣದ ರಾಜ್ಯ ಸಮಿತಿ ಸಭೆಯನ್ನು ನವೆಂಬರ್‌ 23 ಶನಿವಾರ ಬೆಳ್ಳಿಗೆ 11 ಗಂಟೆಗೆ ಯಾದಗಿರಿ ಜಿಲ್ಲೆಯ ಯಾದಗಿರಿ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ರಾಜ್ಯ ಸಂಘಟನಾ ಸಂಚಾಲಕರಾದ ಕೆಂಪಣ್ಣ ಸಾಗ್ಯ ತಿಳಿಸಿದ್ದಾರೆ.

 ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಂಘಟನಾ ಸಂಚಾಲಕರಾದ ಶ್ಯಾಮ್ ಘಾಟಿಗೆ ಯವರು ವಹಿಸಿಕೊಳ್ಳಲಿದ್ದು  ಸಭೆಗೆ ರಾಜ್ಯ ಸಂಘಟನಾ ಸಂಚಾಲಕರಾದ ಎಫ್  ವೈ ದೊಡ್ಡಮನಿ, ರಾಜ್ಯ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಶೋಭಾಕಟ್ಟಿಮನಿ, ಸಂಘಟನಾ ಸಂಚಾಲಕಿಯಾರಾದ ಗೌರಮ್ಮ ದೊಡ್ಡಮನಿ, ಪುಷ್ಪ ಬಳ್ಳಾರಿ, ರಾಜ್ಯ ಸಮಿತಿ ಸದಸ್ಯರಾದ ಪ್ರಭು ಮೇಗಲಮನಿ ರಾಯಚೂರ್, ಆನೇಕಲ್ ವೆಂಕಟೇಶ್ ಮೂರ್ತಿ ಕುಮಾರ್ ರಾಮನಗರ  ಪ್ರಕಾಶ್ ಕೇಲ್ಲೂರ್ ಗದಗ ಚಂದ್ರಕಾಂತ್ ಸಿಂಘೆ ವಿಜಯಪುರ ಬಸವರಾಜ್ ಬಾಡಿ ಹಾಳ್ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಸಂಚಾಲಕರು ಸಂಘಟನಾ ಸಂಚಾಲಕರು ಜಿಲ್ಲಾ ಸಮಿತಿ ಸದಸ್ಯರು ಮುಂತಾದವರು ಭಾಗವಹಿಸಲಿದ್ದು ಮದ್ಯಾಹ್ನ 3 ಗಂಟೆಗೆ ಕಲಬುರ್ಗಿ ವಿಭಾಗಿಯ ಸಂಚಾಲಕರಾದ ಚಂದ್ರುಚಕ್ರವರ್ತಿ ಅಧ್ಯಕ್ಸತೆ ಯಲ್ಲಿ ಜಿಲ್ಲಾ ಸಮಿತಿ ರಚನೆ ಮಾಡಲಾಗುಹುದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಗವಾರ ಬಣದ ಹೆಸರು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಲ್ಲಿ ಹಣ ವಸೂಲು ಮಾಡುತ್ತಿದ್ದಾರೆ ಎಂಬ ದೂರುಗಳು ರಾಜ್ಯ ಸಮಿತಿಗೆ ಬಂದಿದ್ದು ನಾಗವಾರ ಹೆಸರಿಗೆ ಕಪ್ಪು ಚುಕ್ಕೆ ತರುತ್ತಿರುವ ಬಗ್ಗೆ ನಿರ್ದಾಕ್ಸಣ್ಯ ಕ್ರಮ ಕೈಗೊಂಡು ಆಯಾ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಕೂಡ ಮಾಡಲಾಗುವುದು ಎಂದು ತಿಳಿಸಿರುತ್ತಾರೆ.

 ಸಭೆಗೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳು ತಪ್ಪದೆ ಹಾಜರಾಗಿ ತಮ್ಮ ಸಲಹೆ ಯನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಕೆ.ವಿ. ನಾಗರಾಜ್ ಅರಳಸುರಳಿ ಮನವಿ ಮಾಡಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post