ಗ್ಯಾರಂಟಿ ಯೋಜನೆ : ತೀರ್ಥಹಳ್ಳಿಗೆ 10ಕೋಟಿಗೂ ಅಧಿಕ ಅನುದಾನ

30 ಸಾವಿರ ಕುಟುಂಬಕ್ಕೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ -ಶಚೀಂದ್ರ ಹೆಗ್ಡೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 30,800 ಮಹಿಳೆಯರಿಗೆ 6ಕೋಟಿ 16ಲಕ್ಷ, ಅನ್ನಭಾಗ್ಯ ಯೋಜನೆಯಡಿ 29ಸಾವಿರ ಕುಟುಂಬಕ್ಕೆ 1ಕೋಟಿ 56ಲಕ್ಷ, ಗೃಹಜೋತಿ ಯೋಜನೆಯಡಿ 34 ಸಾವಿರ ಸ್ಥಾವರಕ್ಕೆ 1ಕೋಟಿ 60ಲಕ್ಷ, ಯುವನಿಧಿ ಯೋಜನೆಯಡಿ 514ಜನರಿಗೆ 14ಲಕ್ಷ ಹೀಗೆ ತಾಲ್ಲೂಕಿಗೆ ತಿಂಗಳಿಗೆ 10ಕೋಟಿಗೂ ಹೆಚ್ಚಿನ ಹಣ ಬರುತ್ತಿದೆ, ಶಕ್ತಿ ಯೋಜನೆ ಪರಿಣಾಮಕಾರಿಯಾಗಿ ಜಾರಿ ಮಾಡಲು ಕೆಎಸ್‌ಆರ್‌ಟಿಸಿ ಡಿಪೋ ಮಂಜೂರು ಮಾಡಿಸಲು ಪ್ರಯತ್ನಮಾಡೋಣ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಚೀಂದ್ರ ಹೆಗ್ಡೆ ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ವತಿಯಿಂದ ಬೆಜ್ಜವಳ್ಳಿ, ಕೋಣಂದೂರು, ಹೊಸಳ್ಳಿ ಹಾಗೂ ಬಸವಾನಿಯಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ನಾಬಳಾ ಶಚಿಂದ್ರ ಹೆಗ್ಡೆ ನೇತೃತ್ವದಲ್ಲಿ ನೆಡೆಯಿತು.

ಜಿಲ್ಲಾ ಸಮಿತಿ ಸದಸ್ಯರಾದ ಬಿ.ಕೆ. ಉದಯ ಕುಮಾರ್, ಸದಸ್ಯರಾದ ರಾಘವೇಂದ್ರ ಶೆಟ್ಟಿ, ಹುಂಚದಕಟ್ಟೆ ಆದರ್ಶ, ಅಶ್ವಲ್ ಗೌಡ, ನಾಗೇಶ್ ನಾಯ್ಕ್, ಕಬಸೆ ವಿಕ್ರಂ, ಚಿಪ್ಪಿನಕೋಡಿಗೆ ವೆಂಕಟೇಶ್, ದಿಲೀಪ್, ಸೈಯದ್‌ ಯಾಸೀನ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್‌ ಶೈಲಾ ಇದ್ದರು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post