ಸೀಬಿನಕೆರೆ ಶಾಲೆಯಲ್ಲಿ ಯಶಸ್ವಿ ಮಕ್ಕಳ ದಿನಾಚರಣೆ

ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಶಿಬಿರ

ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ತಾಲ್ಲೂಕು ಕಾನೂನು ಸೇವಾ ಸಮಿತಿ ತೀರ್ಥಹಳ್ಳಿ, ಅಭಿಯೋಜಕರು ಮತ್ತು ವಕೀಲರ ಸಂಘ ತೀರ್ಥಹಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೀಬಿನಕೆರೆ ಇವರುಗಳ ಸಹಯೋಗದಲ್ಲಿ ಇತ್ತೀಚೆಗೆ ಮಕ್ಕಳ ದಿನಾಚರಣೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನ ಕಾರ್ಯಕ್ರಮ ಯಶಸ್ವಿಯಾಗಿ ಸೀಬಿನಕೆರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೀತಾಮಣಿಯವರು ಉದ್ಘಾಟಿಸಿ ಮಕ್ಕಳ ದಿನಾಚರಣೆ ಮಹತ್ವ ಮತ್ತು ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಎನ್‌.ರಮೇಶ್‌ ಮಾಜಿ ಪ್ರಧಾನಿ ಜವಹಾರಲಾಲ್‌ ನೆಹರು ಅವರ ಮಕ್ಕಳ ಮೇಲಿನ ಪ್ರೀತಿ ಮತ್ತು ರಾಷ್ಟ್ರದ ಕುರಿತ ಅವರ ದೂರದೃಷ್ಟಿಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ರೇಖಾ ಎನ್.ಬಿ., ಪಟ್ಟಣ ಪಂಚಾಯಿತಿ ಸದಸ್ಯರಾದ ರತ್ನಾಕರ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷರಾದ ರಾಜೇಶ್‌ ಟಿ.ಎನ್.‌ ಮತ್ತಿತರರು ಮಾತನಾಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕ ಮಹಬಲೇಶ್ವರ ಹೆಗಡೆ ಹಾಗೂ ವಂದನಾರ್ಪಣೆಯನ್ನು ಸಹ ಶಿಕ್ಷಕಿ ಇಂದಿರಮ್ಮ ನೆರವೇರಿಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post