ಯಶಸ್ವಿಯಾಗಿ ನಡೆದ ಉಚಿತ ಶ್ರವಣ ತಪಾಸಣೆ ಶಿಬಿರ

ಜನತೆಯ ಆರೋಗ್ಯ ಸಮಸ್ಯೆಗೆ ಸಹಕಾರಿ ವ್ಯವಸ್ಥೆ ಸ್ಪಂದಿಸಬೇಕು – ರಾಘವೇಂದ್ರ ಶೆಟ್ಟಿ

ತೀರ್ಥಹಳ್ಳಿ ತುಳುನಾಡು ಸಿರಿ ಸೌಹಾರ್ದ ಸಹಕಾರಿ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ಕ್ಲಬ್ ಇವರುಗಳ ವತಿಯಿಂದ ಸೊಪ್ಪುಗುಡ್ಡೆ ಮಾರಿಕಾಂಬಾ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಉಚಿತ ಶ್ರವಣ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರ ಉದ್ಘಾಟನೆಗೊಳಿಸಿ ತುಳುನಾಡ ಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮಾತನಾಡಿ, ಅರೋಗ್ಯ ಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತುಳುನಾಡ ಸಿರಿ ಸಹಕಾರಿ ನಿರಂತರವಾಗಿ ಉಚಿತ ಅರೋಗ್ಯ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದೆ. ಯಾವುದೇ ಸಂಘ ಸಂಸ್ಥೆ ಬೆಳೆದು ನಿಲ್ಲಲು ಜನರ ವಿಶ್ವಾಸ ಮುಖ್ಯ ಹಾಗೆ ಬೆಳೆದಾಗ ಕೇವಲ ಲಾಭದ ಕಡೆ ನೋಡದೆ ಜನಪರವಾಗಿ ಕೂಡ ಯೋಚಿಸಬೇಕು ಎನ್ನುವುದು ನಮ್ಮ ಧ್ಯೇಯ. ಈ ಶಿಬಿರಕ್ಕೆ ದೂರದ ದಾವಣಗೆರೆಯಿಂದ ಕೂಡ ಆಸಕ್ತಿಯುಳ್ಳವರು ಬಂದಿರುವುದು ಶಿಬಿರ ಎಷ್ಟು ಮಹತ್ವದ್ದು ಎನ್ನುವುದನ್ನು ಮನದಟ್ಟು ಮಾಡಿದೆ ಮತ್ತು ನಮ್ಮೆಲ್ಲರಲ್ಲಿ ಸಾರ್ಥಕ ಭಾವನೆ ಮೂಡಿಸಿದೆ ಮುಂದು ಈ ರೀತಿ ಜನಪರ ಕಾರ್ಯಕ್ರಮಗಳು ನಿರಂತರವಾಗಿ ತುಳುನಾಡ ಸಿರಿ ಸಹಕಾರಿಯಿಂದ ಮೂಡಿ ಬರಲಿವೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಮುನ್ನೂರು, ತುಳುನಾಡ ಸಿರಿ ಉಪಾಧ್ಯಕ್ಷ ವೈ.ಗಣಪತಿ ನಿರ್ದೇಶಕರಾದ ವಿಶಾಲ್ ಕುಮಾರ್, ಸುರೇಶ್ ಶೆಟ್ಟಿ, ಬೆಟಮಕ್ಕಿ ರಾಘವೇಂದ್ರ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಿನಿ, ರಾಘವೇಂದ್ರ ಭಟ್, ವಿಜ್ಞಹರ್ತ ಆಸ್ಪತ್ರೆ ತಜ್ಞ ವೈದ್ಯರು ಸಿಬ್ಬಂದಿ ಉಪಸ್ಥಿತರಿದ್ದರು.



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post