ಪ್ರಾಚ್ಯಪ್ರಜ್ಞೆ ರಸಪ್ರಶ್ನೆಯಲ್ಲಿ ಗುಡ್ಡೇಕೇರಿ ಪ್ರೌಢಶಾಲೆ ಮಕ್ಕಳ ಸಾಧನೆ

30,000 ಸಾವಿರ ನಗದು ಬಹುಮಾನ ಪಡೆದ ಮಕ್ಕಳು
ಸತತ ಎರಡನೇ ಬಾರಿಗೆ "ಕರ್ನಾಟಕ ಚಾಂಪಿಯನ್ಸ್" ಪಟ್ಟ

ಗುಲ್ಬರ್ಗದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಪ್ರಾಕ್ತನ ಇಲಾಖೆ ವತಿಯಿಂದ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಹೊಸೂರು-ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಭರತ್ ಬಿರಾದರ್ ಮತ್ತು ಸೃಷ್ಟಿ ಕೆ.ಎಸ್. ಪ್ರಥಮ ಸ್ಥಾನ ಪಡೆಯುವ ಮೂಲಕ ಸತತ ಎರಡನೇ ಬಾರಿಗೆ ಕರ್ನಾಟಕ ಚಾಂಪಿಯನ್ಸ್ ಪಟ್ಟ ಅಲಂಕರಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ತಲಾ 15 ಸಾವಿರದಂತೆ 30 ಸಾವಿರ ಬಹುಮಾನ ಪಡೆದಿದ್ದಾರೆ.

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವೀರೇಶ್ ‌ತರಬೇತಿಯಲ್ಲಿ ಮಕ್ಕಳು ಸಾಧನೆ ಮಾಡಿದ್ದಾರೆ. ಮಕ್ಕಳ ಈ ಸಾಧನೆಗೆ ಎಸ್.ಡಿ.ಎಂ‌.ಸಿ., ಪೋಷಕರು, ‌ಸಹ ಶಿಕ್ಷಕರು, ದಾನಿಗಳು, ಹಿರಿಯ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು‌ ಮುಖ್ಯ ಶಿಕ್ಷಕ ಮಂಜುಬಾಬು ತಿಳಿಸಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post