ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಸಿಡಿಮದ್ದು ಪ್ರದರ್ಶನ

ಸಿಡಿಮದ್ದು ಸಿಡಿದು ಬಾಲಕನಿಗೆ ತೀವ್ರ ಗಾಯ
ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಯ ಅಂಗವಾಗಿ ತೆಪ್ಪೋತ್ಸವ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಸಿಡಿಮದ್ದು ಪ್ರದರ್ಶನ ಬಾಲಕನ ಜೀವಕ್ಕೆ ಅಪಾಯ ತಂದಿದೆ. ತೀವ್ರ ಗಾಯಗೊಂಡ 9 ವರ್ಷದ ಬಾಲಕನಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀರ್ಥಹಳ್ಳಿಯಲ್ಲಿ ಜನವರಿ 1 ರಂದು ತೆಪ್ಪೋತ್ಸವ ಮತ್ತು ಸಿಡಿಮದ್ದು ಪ್ರದರ್ಶನ ಸುಮಾರು 6 ಲಕ್ಷ ವೆಚ್ಚದಲ್ಲಿ ನಡೆದಿದೆ. ಸಿಡಿಮದ್ದು ಪ್ರದರ್ಶನದ ನಂತರ ಅರ್ಧ ಸಿಡಿದ ಪಟಾಕಿ ಮತ್ತು ತ್ಯಾಜ್ಯವನ್ನು ಸಂಗ್ರಹಣೆ ಮಾಡದೆ ತುಂಗಾ ನದಿಯ ತೀರದಲ್ಲಿ ಹಾಗೆಯೇ ಉಳಿಸಲಾಗಿತ್ತು. ಜನವರಿ 5 ರಂದು ಕುರುವಳ್ಳಿಯ 9 ವರ್ಷದ ಬಾಲಕ ತನ್ನ ಮೂವರು ಸ್ನೇಹಿತರೊಂದಿಗೆ ನದಿ ತೀರದಲ್ಲಿ ಆಟವಾಡುವಾಗ ಪಟಾಕಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಏಕಾಏಕಿ ಪಟಾಕಿ ಸಿಡಿದಿದ್ದು ಬಾಲಕನಿಗೆ ತೀವ್ರ ಗಾಯಗಳನ್ನು ತಂದೊಡ್ಡಿದೆ.

ಗಾಯಾಳುವನ್ನು ಪಟ್ಟಣದ ಜೆ.ಸಿ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಮೈ,ಕೈ, ಮುಖ ಸುಟ್ಟು ಹೋಗಿದ್ದು ತೀವ್ರ ತರಹದ ಗಾಯಗಳಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post