ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ

 ಶವದ ಬಳಿ ಇದ್ದ ಡೆತ್ ನೋಟ್ ಪೊಲೀಸರ ವಶಕ್ಕೆ

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶ್ರೀನಿಧಿ (24) ಶವ ಗುರುವಾರ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಅವರೊಂದಿಗೆ ಒಂದು ವರ್ಷ ಒಂದು ತಿಂಗಳ ಹಿಂದೆ ವಿವಾಹವಾಗಿದ್ದರು.

ಆರೋಗ್ಯ ಸರಿ ಇಲ್ಲದೆ ಕುಟುಂಬದವರಿಗೆ ತೊಂದರೆಯಾಗುತ್ತಿದೆ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದೆ‌. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post