ಮೇ ನಂತರ ಜಿಪಂ, ತಾಪಂ ಚುನಾವಣೆ

ಅಂತಿಮ ಮೀಸಲಾತಿ ಪಟ್ಟಿ ಬಿಡುಗಡೆಗೆ ಸರ್ಕಾರ ಸಮ್ಮತಿ
ಹೈಕೋರ್ಟ್ ವಿಚಾರಣೆಗೆ ಮಾಹಿತಿ ನೀಡಿದ ಸರ್ಕಾರ
ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಸಂಬಂಧ ಇಂದು ಹೈಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ, ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ನಡೆಸಬಹುದೆಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಅಂತ್ಯಕ್ಕೆ ಮೀಸಲಾತಿ ಪಟ್ಟಿಯನ್ನು ನೀಡಲಾಗುತ್ತದೆ. ಆ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇದರ ಅನ್ವಯ ಜೂನ್, ಜುಲೈ ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿ ಅಂತ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದೇ ಇರುವ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿತು. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ವೇಳೆಯಲ್ಲಿ ಈ ಮಾಹಿತಿಯನ್ನು ಅಡ್ವಕೇಟ್ ಜನರಲ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ ಅವರು ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೇ ವೇಳಾಪಟ್ಟಿ ಪ್ರಕಟಿಸಲು ರೆಡಿ ಇರೋದಾಗಿ ಹೇಳಿದರು.

ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜೂನ್ ಅಥವಾ ಜುಲೈನಲ್ಲಿ ಚುನಾವಣಾ ಆಯೋಗವು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬಹುದು ಎಂಬುದಾಗಿ ಎಜಿ ಹೈಕೋರ್ಟ್ ಗೆ ತಿಳಿಸಿದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post