ತೀರ್ಥಹಳ್ಳಿ ಯುವ ಕಾಂಗ್ರೆಸ್ ನೂತನ ಸಾರಥಿಗಳು

ಯುವ ಕಾಂಗ್ರೇಸ್ ಅಧ್ಯಕ್ಷರಾಗಿ ಪೂರ್ಣೇಶ್ ಕೆಳಕೆರೆ
ಗ್ರಾಮಾಂತರ ಅಧ್ಯಕ್ಷರಾಗಿ ರವಿಕುಮಾರ್ ಎಚ್.ಡಿ.
ನಗರ ಬ್ಲಾಕ್ ಅಧ್ಯಕ್ಷರಾಗಿ ಶ್ರೇಯಸ್ ಎಸ್ ರಾವ್

ತೀರ್ಥಹಳ್ಳಿ ತಾಲ್ಲೂಕಿನ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆ ಶುಕ್ರವಾರ ಪ್ರಕಟವಾಗಿದೆ. ಮೂವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಸದ್ಯ ಗೆಲುವು-ಸೋಲಿನ ತಲೆಬಿಸಿಗೆ ತೆರೆ ಸಿಕ್ಕಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಡಿಪಿ ಸದಸ್ಯ ಪೂರ್ಣೇಶ್ ಕೆಳಕೆರೆ ಆಯ್ಕೆಯಾಗಿದ್ದಾರೆ. ಎದುರಾಳಿ ಸಂದೀಪ್ ಗೌಡ ವಿರುದ್ಧ 4637 ಮತ ಪಡೆದು ವಿಜಯಶಾಲಿಯಾಗಿದ್ದಾರೆ.

ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾದಿಗಲ್ಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ, ಗ್ರಾಮ ಪಂಚಾಯತಿ ಒಕ್ಕೂಟದ ಉಪಾಧ್ಯಕ್ಷ ರವಿಕುಮಾರ್ ಎಚ್.ಡಿ. ಆಯ್ಕೆಯಾಗಿದ್ದಾರೆ. ಎದುರಾಳಿ ಗಗನ್ ಕುಮಾರ್ ವಿರುದ್ಧ 2623 ಮತ ಪಡೆದು ವಿಜಯಶಾಲಿಯಾಗಿದ್ದಾರೆ.

ನಗರ ಬ್ಲಾಕ್ ಅಧ್ಯಕ್ಷರಾಗಿ ಯುವ ಮುಖಂಡ ಶ್ರೇಯಸ್ ಎಸ್. ರಾವ್ ಆಯ್ಕೆಯಾಗಿದ್ದಾರೆ. ಎದುರಾಳಿ ಪ್ರವೀಣ್ ಎ ವಿರುದ್ಧ 542 ಮತ ಪಡೆದು ವಿಜಯಶಾಲಿಯಾಗಿದ್ದಾರೆ.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post