ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ

ಮಾಳೂರು ವೃತ್ತ ನಿರೀಕ್ಷಕ ಶ್ರೀಧರ್ ಕೆ‌. ಅಯ್ಕೆ

2024ನೇ ಸಾಲಿನ ಮುಖ್ಯಮಂತ್ರಿ ಚಿನ್ನದ  ಪದಕ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಘೋಷಿಸಲಾಗಿದ್ದು ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಧರ್ ಕೆ. ಅವರನ್ನು ಆಯ್ಕೆ ಮಾಡಿ ಸರ್ಕಾರದ ಒಳಾಡಳಿತದ ಅಪರ ಮುಖ್ಯ ಕಾರ್ಯದರ್ಶಿ ಎಂ.ಧನಂಜಯ ಅದೇಶಿಸಿದ್ದಾರೆ.

ಶ್ರೀಧರ್ ಮಾಳೂರು ವೃತ್ತ ನಿರೀಕ್ಷಕರಾಗಿದ್ದು ಅವರ ಅಧೀನದಲ್ಲಿ ಮಾಳೂರು ಮತ್ತು ಆಗುಂಬೆ ಪೊಲೀಸ್ ಠಾಣೆ ಇದೆ. ಸಿಬ್ಬಂದಿಗಳೊಂದಿಗೆ ಸೌಜನ್ಯಯುತವಾಗಿರುವ ಅವರ ಬಗ್ಗೆ ಸಿಬ್ಬಂದಿ ವರ್ಗದಲ್ಲಿ ಉತ್ತಮ ಅಭಿಪ್ರಾಯಗಳು ಇವೆ. ಬಂದೋಬಸ್ತ್ ಮುಂತಾದ ಕಠಿಣ ಸಂದರ್ಭದಲ್ಲಿಯೂ ಸಿಬ್ಬಂದಿಗಳ‌ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಪುಣತೆಯನ್ನು ಹೊಂದಿದ್ದಾರೆ. ಸೌಜನ್ಯಯುತವಾಗಿ ಸಿಬ್ಬಂದಿಗಳ ಜೊತೆ ಕರ್ತವ್ಯಕ್ಕೆ ಅಣಿಯಾಗುತ್ತಾರೆಂಬ ಅಭಿಪ್ರಾಯಗಳು ಇವೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post