ನಟಿ ಸಾತ್ವಿಕಾ, ನಟ ಸಂತೋಷ್ ಬಿಲ್ಲವ ಜೋಡಿಯ ಮೋಡಿ
ನಿರ್ಮಾಪಕ ಲಕ್ಷ್ಮೀ ಕಾಂತ್ ರೆಡ್ಡಿ, ನಿರ್ದೇಶಕ ಮಂಜೇಶ್ ಸಾಥ್
ಕನಸೊಂದು ಶುರುವಾಗಿದೆ ಸಿನಿಮಾ ರಾಜ್ಯದ ಅನೇಕ ಚಿತ್ರ ಮಂದಿರದಲ್ಲಿ ಭರ್ಜರಿ ಪ್ರದರ್ಶನಗೊಳ್ಳುತ್ತಿದೆ. ಟ್ರೈಲರ್ ಮೂಲಕ ಸದ್ದು ಮಾಡಿದ್ದ ಚಿತ್ರ ತಂಡಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನೈಜ ಕಥೆ ಆಧರಿಸಿದ ಸಿನಿಮಾ ದೊಡ್ಡ ಪರದೆಗಳಲ್ಲಿ ಸದ್ದು ಮಾಡುತ್ತಿದೆ.ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಪಾದಾರ್ಪಣೆ ಮಾಡಿದ್ದ ನಿರ್ದೇಶಕ ಮಂಜೇಶ್ ಅವರು ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆಗೆ ಅಕ್ಷನ್ ಕಟ್ ಹೇಳಿದ್ದಾರೆ.
ಕೆಕೆಆರ್ ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀಕಾಂತ್ ರೆಡ್ಡಿ ನಿರ್ಮಿಸಿದ್ದಾರೆ. 'ಕನಸೊಂದು ಶುರುವಾಗಿದೆ' ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ.
ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ & ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.
ಮಂಜೇಶ್ ಭಾಗವತ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕ್ಯಾಮೆರಾ ಹಿಡಿದಿದ್ದು, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿಎಸ್ ಗೌಡ ಸಂಕಲನ ಜವಾಬ್ದಾರಿ ನಿಭಾಯಿಸಿದ್ದಾರೆ. ಶಶಾಂಕ್, ಸಿಂಪಲ್ ಸುನಿ & ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.ಚಿತ್ರ ತಂಡ ತೀರ್ಥಹಳ್ಳಿಗೆ ಭೇಟಿ ನೀಡಿದ್ದು ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪ್ರಸನ್ನ ತಿರಳೇಬೈಲು, ಬಿ.ಜಿ.ಆದರ್ಶ, ರಮೇಶ್, ಭರತ್ ಹೂಗಾರ್, ಭರತ್ ಮತ್ತಿತರರು ಇದ್ದರು.

