ಮಂಗನ ಕಾಯಿಲೆ ; 7 ವರ್ಷದ ಬಾಲಕ ಸಾವು

ಒಂದೇ ಮನೆಯಲ್ಲಿ ಇಬ್ಬರಿಗೆ ಕೆಎಫ್ ಡಿ ದೃಢ

ಮಣಿಪಾಲ ಆಸ್ಪತ್ರೆಯಲ್ಲಿ ಬಾಲಕ ಸಾವು

ಮಂಗನ ಕಾಯಿಲೆಗೆ 7 ವರ್ಷದ ಬಾಲಕ ಮೃತಪಟ್ಟ ಧಾರುಣ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

15 ದಿನಗಳ ಹಿಂದೆ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತ ದಂಪತಿಯ ಮಕ್ಕಳಿಗೆ ಮಂಗನಕಾಯಿಲೆ ದೃಢಪಟ್ಟಿತ್ತು.

ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಬಾಲಕಿ ಚೇತರಿಸಿಕೊಂಡಿದ್ದಾರೆ. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post