ಶಿವಮೊಗ್ಗ ಪ್ರೆಸ್ ಟ್ರಸ್ಟ್ ವಾರ್ಷಿಕ ಪ್ರಶಸ್ತಿ ಘೋಷಣೆ

ಪತ್ರಕರ್ತ ಶಿವಾನಂದ ಕರ್ಕಿ ಅವರಿಗೆ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿ
ಏಪ್ರಿಲ್ 14 ಸೋಮವಾರ ಸಂಜೆ ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಿರಿಯ ಪತ್ರಕರ್ತರಿಗೆ ಪಿ.ಲಂಕೇಶ್ ವಾರ್ಷಿಕ ಪ್ರಶಸ್ತಿಗಳನ್ನು ಕೊಡುತ್ತಿದ್ದು, ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ, ನೆಲದಧ್ವನಿ ಪ್ರಧಾನ ಸಂಪಾದಕ ಶಿವಾನಂದ ಕರ್ಕಿ ಅಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 14ರ ಸೋಮವಾರ ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ ತಿಳಿಸಿದ್ದಾರೆ.

ಲಂಕೇಶ್ ಪ್ರಶಸ್ತಿಗೆ 2022, 2023, 2024ನೇ ಸಾಲಿನವರೆಗೆ ಕ್ರಮವಾಗಿ ಗೋಪಾಲ್ ಯಡಗೆರೆ, ಎಸ್. ಚಂದ್ರಕಾಂತ್ ಹಾಗೂ ಕೆ. ತಿಮ್ಮಪ್ಪ ಅವರಿಗೆ ಪಶಸ್ತಿ, ಸೊರಬದ ಹೆಚ್.ಕೆ.ಎಸ್ ಸ್ವಾಮಿ ಅವರಿಗೆ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯವರೇ ಆದ ಪಿ.ಲಂಕೇಶ್ ಹೆಸರಿನ ಪ್ರಶಸ್ತಿಗೆ ಮೂವರು ಹಿರಿಯರನ್ನು ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 20 ಸಾವಿರ ನಗದು, ಸ್ಮರಣಿಕೆ, ಸನ್ಮಾನ ಪತ್ರವನ್ನು ಒಳಗೊಂಡಿದೆ. ಕ್ರಿಯಾಶೀಲ ಪ್ರಶಸ್ತಿಯು ತಲಾ 10 ಸಾವಿರ ನಗದು ಮತ್ತು ಸ್ಮರಣಿಕೆ ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ.

ಜೀವಮಾನವಿಡೀ ಪತ್ರಿಕೋದ್ಯಮಕ್ಕೆ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಗಳೇ ಗುರುತಿಸಬೇಕು. ಪತ್ರಕರ್ತರ ಹಿತಕ್ಕಾಗಿ ಕೆಲಸ ಮಾಡುತ್ತಿರುವ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಈ ಪ್ರಶಸ್ತಿ ನೀಡುವ ಮೂಲಕ ಪತ್ರಕರ್ತರನ್ನು ಉತ್ತೇಜಿಸುವ ಕೆಲಸ ಮಾಡುತ್ತಿದೆ ಎಂದರು.

ಪ್ರಶಸ್ತಿಯನ್ನು ನಾಡೋಜ ಕುಂ ವೀರಭದ್ರಪ್ಪ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಾನಂದ ಕರ್ಕಿ ಸುಮಾರು 22 ವರ್ಷಗಳ ಕಾಲ ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ನೆಲದಧ್ವನಿ ಸಂಜೆ ಪತ್ರಿಕೆಯ ಸಂಪಾದಕರಾಗಿ, ವಿನೂತನ ಮಾತುಕತೆ ವಾರಪತ್ರಿಕೆಯ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ ಚಟುವಟಿಕೆಯಲ್ಲೂ ಗುರುತಿಸಿಕೊಂಡಿರುವ ಅವರು ಖಾನೇಷುಮಾರಿ, ಗರ್ಕು ಕಾದಂಬರಿಯನ್ನು ಪ್ರಕಟಿಸಿದ್ದಾರೆ. ಹಾಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸದಸ್ಯರಾಗಿದ್ದು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. 
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post