ಶಿವಾನಂದ ಕರ್ಕಿ ಅವರಿಗೆ ಪತ್ರ ಬರೆದು ಅಭಿನಂದಿಸಿದ ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಕ್ರಿಯಾಶೀಲ ಪ್ರಶಸ್ತಿ ಪುರಸ್ಕಾರಕ್ಕೆ ಮೆಚ್ಚುಗೆ
ಪತ್ರ ಬರೆದು ಅಭಿನಂದಿಸಿದ ಸಂಸದ ಬಿ.ವೈ.ರಾಘವೇಂದ್ರ

ನಾಡಿನ ಹಿರಿಯ ಪತ್ರಕರ್ತ, ಲೇಖಕ, ಕಾದಂಬರಿಗಾರ ಶಿವಾನಂದ ಕರ್ಕಿ ಅವರಿಗೆ ಇತ್ತೀಚಿಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತನ್ನ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿ ಪಡೆದ ಅವರಿಗೆ ಸಂಸದ ಬಿ ವೈ ರಾಘವೇಂದ್ರ ಪತ್ರದ ಮೂಲಕ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಪತ್ರದಲ್ಲಿ ಶಿವಾನಂದ ಅವರ ಸಾಮಾಜಿಕ ಹೋರಾಟ, ಬರಹಗಳು ಮತ್ತು ಬದುಕನ್ನು ತಾವು ಹತ್ತಿರದಿಂದ ಗಮನಿಸಿದ್ದು ಅವರೊಬ್ಬ ಮಾದರಿ ಪತ್ರಕರ್ತ ಹಾಗೂ ಜನಪರ ಸಾಹಿತಿ. ಬಿಡುವಿನ ವೇಳೆಯಲ್ಲಿ ಅವಕಾಶ ದೊರೆತಾಗ ಅವರ ಸಾಹಿತ್ಯ ಹಾಗೂ ಅನೇಕ ಪ್ರಭಾವಶಾಲಿ ವರದಿಗಳನ್ನು ಪ್ರಜಾವಾಣಿಯಲ್ಲಿ ಓದಿರುವೆ. ಈಗ ಅವರಿಗೆ ದೊರೆತಿರುವ ಪ್ರಶಸ್ತಿಗೆ ಅವರು ಅತ್ಯಂತ ಅರ್ಹರು ಮಾತ್ರವಲ್ಲ ಪ್ರಶಸ್ತಿಗೂ ಮೌಲ್ಯ ಹೆಚ್ಚಾಗಿದೆ ಎಂದು ರಾಘವೇಂದ್ರ ಹೇಳಿದ್ದಾರೆ.

ಶಿವಾನಂದ ನೆಲದ ಧ್ವನಿ ಪತ್ರಿಕೆ ಹಾಗೂ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕರು, ಪ್ರಜಾವಾಣಿ ದಿನ ಪತ್ರಿಕೆಯ ತೀರ್ಥಹಳ್ಳಿ ವರದಿಗಾರನಾಗಿ 25ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಜಾನಪದ ಎಂ.ಎ. ಓದುವಾಗಲೇ ಅನೇಕ ಚೇತೋಹಾರಿ ಕತೆಗಳನ್ನು ಬರೆದು ಭರವಸೆ ಮೂಡಿಸಿದ್ದ ಕರ್ಕಿ ಪ್ರತಿಷ್ಠಿತ ಪ್ರಜಾವಾಣಿ, ದೀಪಾವಳಿ ವಿಶೇಷಾಂಕ ಸ್ಪರ್ಧೆಯಲ್ಲಿ ಮೆಚ್ಚುಗೆಯನ್ನು ಪಡೆದಿದ್ದರು. ಇತ್ತೀಚೆಗೆ ತಮ್ಮ ಖಾನೇಷುಮಾರಿ ಕೃತಿ ಮೂಲಕ ನಾಡಿನ ಸಾಹಿತ್ಯ ವಲಯದ ಗಮನಸೆಳೆದು ಬಳಿಕ ಗರ್ಕು ಎಂಬ ಕಾದಂಬರಿಯಯನ್ನು ಕೂಡ ರಚಿಸಿದ್ದಾರೆ.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post