ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ

ರಘುನಾಥ್ ಎಸ್. ಮತ್ತು ರಘುರಾಮ್‌ ಎನ್.ಎಂ. ಗೆಲ್ಲಿಸಿ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಸಹಾಯ,ಯುವಕರು ಹಾಗೂ ಮಹಿಳೆಯರು ಸೇರಿದಂತೆ ಎಲ್ಲಾ ಸದಸ್ಯರಿಗೂ ಸಮಾನ ಅವಕಾಶ ನೀಡುವ ಧ್ಯೇಯ ನಮ್ಮದಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆಯ ರಾಜ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ರಘುನಾಥ್ ಎಸ್.ಹೇಳಿದರು.

ತೀರ್ಥಹಳ್ಳಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ರಾಜ್ಯ ಬ್ರಾಹ್ಮಣ ಸಂಘದ ಚಟುವಟಿಕೆಗಳನ್ನು ಜಿಲ್ಲೆ ಹಾಗೂ ತಾಲೂಕುಗಳಿಗೂ ವಿಸ್ತರಿಸುವ ಗುರಿ ನಮ್ಮದು,ಹಾಗೂ ಮುಂದಿನ ದಿನಗಳಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಿದ್ದೇವೆ,ಜೊತೆಗೆ ಸರ್ಕಾರದ ಯೋಜನೆಗಳನ್ನು ಸಮುದಾಯದವರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.ಈ ಚುನಾವಣೆಯಲ್ಲಿ ಸಮುದಾಯದ ಮತದಾರರು ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲಾ ಪ್ರತಿನಿಧಿ ಸ್ಥಾನದ ಅಭ್ಯರ್ಥಿ ರಘುರಾಮ್ ಎನ್.ಎಂ.ಮಾತನಾಡಿ ನಮ್ಮ ಪ್ರಮುಖ ಯೋಜನೆಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿದೆ.ಏಪ್ರಿಲ್ 13ರಂದು ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ನೆಡೆಯುವ  ಚುನಾವಣೆಯ ಮತದಾನ ಕೇಂದ್ರಕ್ಕೆ ಸಮುದಾಯದ ಮತದಾರರು ಆಗಮಿಸಿ ನಮಗೆ ಮತ ನೀಡಿ ಗೆಲುವಿನ ರಕ್ಷೆ ನೀಡಬೇಕೆಂದರು.

ಈ ಪತ್ರಿಕಾಗೋಷ್ಟಿಯಲ್ಲಿ ಬ್ರಾಹ್ಮಣ ಮುಖಂಡರಾದ ಆರ್.ಲಕ್ಷ್ಮಿಕಾಂತ್,ಆರ್.ಪ್ರಸನ್ನಕುಮಾರ್,ದತ್ತಾತ್ರಿ,ಶಂಕರ್.ಎ.ಮೋಹನ್ ಭಟ್ ಮುಂತಾದವರಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post