ಕವಿತಾ ಎಂ ಜ್ಯೋಯ್ಸ್ ನಿಧನ


ತೀರ್ಥಹಳ್ಳಿ ಕೃಷಿಕರ ಸೌಹಾರ್ದ ಸಹಕಾರಿ ಸಂಘದ (ಟಾಸ್) ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಲ ಕವಿತ ಎಂ  ಜೊಯ್ಸ್ (41) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.

ಪಟ್ಟಣದ ಬಾಳೆಬೈಲು ಬಡಾವಾಣೆ ನಿವಾಸಿಯಾಗಿದ್ದ ಇವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರದಂದು ಕನ್ನಂಗಿಯಲ್ಲಿ ನೆರವೇರಿತು.

ಇವರ ನಿಧನಕ್ಕೆ ಟಾಸ್ ಸಂಸ್ಥೆ ಅಧ್ಯಕ್ಷ,  ಶಾಸಕ ಆರಗ ಜ್ಞಾನೇಂದ್ರ ಟಾಸ್ ಸಂಸ್ಥೆಯ ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post