ತೀರ್ಥಹಳ್ಳಿಯಲ್ಲಿ ಮಲ್ನಾಡೋತ್ಸವ: ಇಂದು ಸಂಜೆ ಡ್ಯಾನ್ಸ್

ಶಾಂತವೇರಿ ಗೋಪಾಲ ಗೌಡರಂಗ ಮಂದಿರದಲ್ಲಿ ಅದ್ದೂರಿ ಕಾರ್ಯಕ್ರಮ 
ರಂಗು ಶುರು! ಬಟ್ಟೆ, ಆಹಾರ, ಫ್ಯಾಷನ್, ಕೃಷಿ ಮಳೆಗಳ ವಿಶೇಷ ಆಕರ್ಷಣೆ

ನಮ್ಮೂರ್ ಎಕ್ಸ್‌ಪ್ರೆಸ್‌ ಮಾಧ್ಯಮ ಸಂಸ್ಥೆಯ 10 ನೇ ವರ್ಷದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿರುವ ಮಲ್ನಾಡೋತ್ಸವ - 2025ರಲ್ಲಿ ಇಂದು ಸಂಜೆ  ಡಾನ್ಸ್ ಎಕ್ಸ್ ಪ್ರೆಸ್ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಪ್ರಸಿದ್ಧ ಕಲಾವಿದರು ಪ್ರದರ್ಶನ ನೀಡಲಿದ್ದಾರೆ.

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಹಾಗೂ ಪಟ್ಟಣ ಪಂಚಾಯಿತಿ ಆವರಣದಲ್ಲಿ ಸುಮಾರು 70 ಹೆಚ್ಚು ವಿವಿಧ ಮಳಿಗೆಗಳು ಜನರನ್ನು ಆಕರ್ಷಣೆ ಮಾಡಿವೆ. ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 60ಕ್ಕೂ ಹೆಚ್ಚು ಕೃಷಿ, ಆಹಾರ, ಫ್ಯಾಶನ್ ಹಾಗೂ ಆಟೋ, ರಿಯಲ್ ಎಸ್ಟೇಟ್  ಮುಂತಾದ ಮಳಿಗೆಗಳು ಬಂದಿದ್ದು, ತೀರ್ಥಹಳ್ಳಿ ಪಟ್ಟಣ ಮತ್ತು ತಾಲೂಕಿನ ಸಮಸ್ತ ಜನರನ್ನು ಆಯೋಜಕರು ಸ್ವಾಗತಿಸಿದ್ದಾರೆ. ಬೆಳಿಗ್ಗೆಯಿಂದ ರಾತ್ರಿವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮೇ 11ರ ಸಂಜೆ 6ರಿಂದ ರಾತ್ರಿವರೆಗೆ ರಾಜ್ಯದ ಪ್ರಸಿದ್ಧ ನೃತ್ಯ ಕಲಾವಿದರಿಂದ ಡಾನ್ಸ್ ಎಕ್ಸ್ಪ್ರೆಸ್ ನಡೆಯಲಿದೆ.






ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post