ಗಿರಗಿಟ್ಲೆ ಪುಸ್ತಕ ಬಿಡುಗಡೆ ಇಂದು

ಲೇಖಕ ಶಿವಾನಂದ ಕರ್ಕಿ ಅವರ ಪುಸ್ತಕ

ಧ್ವನಿ ಪ್ರಕಾಶನ ಪ್ರಕಟಿಸಿರುವ ಕಲಾತ್ಮಕ ಶೈಲಿಯ ಲೇಖಕ, ಹಿರಿಯ ಪತ್ರಕರ್ತ ಶಿವಾನಂದ ಕರ್ಕಿ ರಚನೆಯ ಪ್ರವಾಸ ಕಥನ 'ಗಿರಗಿಟ್ಲೆ' ಇಂದು ಸಂಜೆ ತೀರ್ಥಹಳ್ಳಿ ಶಾಂತವೇರಿ ಗೋಪಾಲಗೌಡ ರಂಗ ಮಂದಿರದಲ್ಲಿ ಬಿಡುಗಡೆಯಾಗಲಿದೆ.

ಪುಸ್ತಕವನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್‌ ಅನಂತಮೂರ್ತಿ ಬಿಡುಗಡೆ ಮಾಡಲಿದ್ದಾರೆ. ಕೃತಿಯ ಕುರಿತು ಕನ್ನಡ ಸಹಪ್ರಾಧ್ಯಾಪಕಿ ಭಾರತಿ ದೇವಿ ಪಿ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಹ್ಯಾದ್ರಿ ಸಮೂಹ ಸಂಸ್ಥೆಯ ಅಧ್ಯಕ್ಷ ಬಸವಾನಿ ವಿಜಯದೇವ್‌ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ಕೆ.ರಮೇಶ್‌ ಶೆಟ್ಟಿ, ಸಾಹಿತಿ ನೆಂಪೆ ದೇವರಾಜ್‌ ವಹಿಸಲಿದ್ದಾರೆ.

ಶಿವಾನಂದ ಕರ್ಕಿ ಸಾಹಿತ್ಯ ವಲಯದಲ್ಲಿ ಮಲೆನಾಡ ವಿವರಗಳನ್ನು ಅತ್ಯಂತ ಕಲಾತ್ಮಕ ಶೈಲಿಯಲ್ಲಿ ಕಟ್ಟಿ ಕೊಡಬಲ್ಲ ಲೇಖಕ ಎಂದೇ ಹೆಸರು ಮಾಡಿದವರು. ಅವರ ಬಿಡಿ ಬರಹಗಳ ಮೊದಲ ಕೃತಿ ಖಾನೇಷುಮಾರಿ ಹಾಗೂ ಎರಡನೇ ಕೃತಿ "ಗರ್ಕು " ಈಗಾಗಲೇ ಜನಪ್ರಿಯತೆಗಳಿಸಿವೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post