ಎಸ್‌ಎಸ್‌ಎಲ್‌ಸಿ ತೀರ್ಥಹಳ್ಳಿ ರಾಜ್ಯಕ್ಕೆ ಪ್ರಥಮ

ಪ್ರಥಮ ರ್ಯಾಂಕ್‌ ಗರಿಮೆಗೆ ಮತ್ತೊಂದು ಹಿರಿಮೆ
202 ಶಿಕ್ಷಣ ಇಲಾಖೆ ಪೈಕಿ ಕ್ಷೇತ್ರ ಶಿಕ್ಷಣ ಇಲಾಖೆಗೆ ಪ್ರಥಮ ಸ್ಥಾನ
ಬೈಕ್‌ನಲ್ಲೇ‌ ಕ್ಷೇತ್ರ ಸುತ್ತಾಡಿದ ಬಿಇಓ ಗಣೇಶ್

ತೀರ್ಥಹಳ್ಳಿ ತಾಲ್ಲೂಕು ರಾಜ್ಯದಲ್ಲೇ‌ 2025ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಪಿಯುಸಿಯಲ್ಲಿಯೂ ದೀಕ್ಷಾ ಆರ್‌ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿಯೂ ತಾಲ್ಲೂಕು ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ರಾಜ್ಯದ 202 ಕ್ಷೇತ್ರ ಶಿಕ್ಷಣ ಇಲಾಖೆ ಪೈಕಿ ಶೇಕಡಾ 94.16 ಪಡೆಯುವ ಮೂಲಕ ತೀರ್ಥಹಳ್ಳಿ ತಾಲ್ಲೂಕು ಪ್ರಥಮ ಸ್ಥಾನಕ್ಕೆ ಏರಿದೆ. ಗುರುವಾರ ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಇಲಾಖೆ ಅಧಿಕೃತವಾಗಿ ಮಾಹಿತಿಯನ್ನು ಗುರುವಾರ ಪ್ರಕಟಿಸಿದೆ. ಈ ಕ್ರಮಾಂಕಕ್ಕೆ ಎಸ್‌ಎಸ್‌ಎಲ್‌ಸಿಯ ಮೊದಲ ಪರೀಕ್ಷೆಯ ಫಲಿತಾಂಶವನ್ನು ಪರಿಗಣಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಒಟ್ಟು 1456 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 1371 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದವರಲ್ಲಿ 693 ಬಾಲಕರು, 678 ಬಾಲಕೀಯರು ಇದ್ದಾರೆ. ನಂತರದ ಸ್ಥಾನದಲ್ಲಿ ಸಿದ್ದಾಪುರ, ಪುತ್ತೂರು, ಬೆಳ್ತಂಗಡಿ, ಸಕಲೇಶಪುರ ಪಡೆದುಕೊಂಡಿದೆ.

ಬೈಕ್‌ನಲ್ಲೇ ಕ್ಷೇತ್ರ ಸುತ್ತಾಡಿದ ಬಿಇಓ ಗಣೇಶ್

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣ ಇಲಾಖೆಗೆ ತನ್ನದೇ ಆದ ವಾಹನದ ಸೌಲಭ್ಯ ಇರಲಿಲ್ಲ. ಮಲೆನಾಡು ಪ್ರದೇಶವಾಗಿದ್ದರು ನೂರಾರು ಕಿಲೋ ಮೀಟರ್‌ ಕ್ರಮಿಸುವುದು ಕಷ್ಟ ಸಾಧ್ಯ. ಮಳೆಗಾಲದ ಸಂದರ್ಭದಲ್ಲಿಯೂ ಶಾಲೆಗಳ ಪರಿಸ್ಥಿತಿ ಅವಲೋಕ ಮಾಡುವುದನ್ನು ಬಿಇಓ ವೈ.ಗಣೇಶ್‌ ಬಿಟ್ಟಿರಲಿಲ್ಲ. ಬಹುತೇಕ ಸಂದರ್ಭದಲ್ಲಿ ಬೈಕ್‌ನಲ್ಲಿಯೇ ಓಡಾಡಿ ಶೈಕ್ಷಣಿಕ ಪ್ರಗತಿಗೆ ವೇಗ ನೀಡಿದ್ದರು. ಇದೀಗ ತೀರ್ಥಹಳ್ಳಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯ ಶ್ಲಾಘನೀಯ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post