ಚಿತ್ರೀಕರಣಕ್ಕೆ ಆಗಮಿಸಿದ್ದ ನಿಜು ವಿಕೆ ಸಾವು

ಕಾಂತಾರ ಸಿನಿಮಾ ಹಿನ್ನೆಲೆ ಆಗುಂಬೆಯಲ್ಲಿದ್ದ ನಿಜು
ಆಸ್ಪತ್ರೆಗೆ ಕೊಂಡೊಯ್ಯುವಾಗ ಹೃದಯಾಘಾತಕ್ಕೆ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯ ಹೋಂಸ್ಟೇ ಒಂದರಲ್ಲಿ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ.ಕೆ. ಕೆಲವು ದಿನಗಳಿಂದ ಕಾಂತಾರ ಚಿತ್ರೀಕರಣಕ್ಕಾಗಿ ತಂಗಿದ್ದರು. ಬುಧವಾರ ರಾತ್ರಿ ಏಕಾಏಕಿ ವಸತಿಗೃಹದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಂದ ತಕ್ಷಣ ತೀರ್ಥಹಳ್ಳಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅಸು ನೀಗಿದ್ದಾರೆ.
ಮೃತದೇಹವನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕುಟುಂಬಸ್ಥರು ಕೇರಳದಿಂದ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post